30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ,ಆಸ್ಪತ್ರೆಗೆ ದಾಖಲು…

ಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥರಾಗಿ ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಬೆಳಕಿಗೆ ಬಂದಿದೆ.ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದಿದ್ದಾರೆ.ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ. ಈ ಬಗ್ಗೆ ಪ್ರಾಥಮಿಕ ಶಾಲೆಗಳ ಜಿಲ್ಲಾ ನಿರೀಕ್ಷಕರಿಗೆ ತಿಳಿಸಿದ್ದು, ಅವರು ಇಂದು (ಜನವರಿ 10) ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ತಿಳಿಸಿದ್ದಾರೆ.ಸದ್ಯಕ್ಕೆ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಶ್ರೀ ವಚನಾನಂದ ಸ್ವಾಮೀಜಿ ಭೇಟಿ

Tue Jan 10 , 2023
ಹುಬ್ಬಳ್ಳಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಶ್ರೀ ವಚನಾನಂದ ಸ್ವಾಮೀಜಿ ಭೇಟಿಹುಬ್ಬಳ್ಳಿಯ ಆದರ್ಶನಗರದಲ್ಲಿನ ಸಿಎಂ ಮನೆಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಗೊಂದಲ ಕುರಿತು ಚರ್ಚೆಅರ್ಧ ಗಂಟೆಗಳ ಕಾಲ ಸಿಎಂ ಜೊತೆ ಮಾಡಿದ ಶ್ರೀ ವಚನಾನಂದ ಸ್ವಾಮೀಜಿಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಗಡುವು ನೀಡಿದ್ದ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಈ ಹಿನ್ನೆಲೆಯಲ್ಲಿ ಮಹತ್ವದಚರ್ಚೆ ನಡೆಸುತ್ತಿರುವ ಸ್ವಾಮೀಜಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial