ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ: ಸಚಿವ ಗೋವಿಂದ ಕಾರಜೋಳ

ಆರ್ಎಸ್ಎಸ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್ಎಸ್ಎಸ್ಅಲ್ಲ. ಹೀಗಾಗಿ ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆಯ ಉದ್ದೇಶ ಹೊಂದಿದೆ ಎಂದರು.

ದೇವೆಗೌಡರು ಪ್ರಧಾನಿ ಆಗಿದ್ದಾಗ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಇನ್ನಷ್ಟು ದಿನ ಅವರ ಕೈಯಲ್ಲಿ ಆಡಳಿತವಿದ್ದಿದ್ದರೆ ಕಾಶ್ಮೀರ ಪಾಕಿಸ್ತಾನದ ಪಾಲಾಗುತ್ತಿತ್ತುಎಂದು ವ್ಯಂಗ್ಯವಾಡಿದರು. ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ದೇಶ ಅಖಂಡ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅಲ್ಲಿನ ಬಡವರು, ಪರಿಶಿಷ್ಟರಿಗೆ ಮೀಸಲಾತಿ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ಜೆಡಿಎಸ್ ಭಾವನಾತ್ಮಕ ವಿಷಯಗಳನ್ನು ಮುಂದೆ ತರುತ್ತಿವೆ. ನಾವು ಅಭಿವೃದ್ಧಿ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಆರ್ಎಸ್ಎಸ್ ದೇಶಭಕ್ತಿ ಬಗ್ಗೆ ಹೇಳುತ್ತದೆ. ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಸಂತರಾಗಿರುವವರು, ಶರಣರಾಗಿರುವವರು ಕೇಶವ ಕೃಪಾದಲ್ಲಿ ಇದ್ದಾರೆ. ಹೀಗಾಗಿ ಆರ್ಎಸ್ಎಸ್ ಬಗ್ಗೆ ಮಾತನಾಡದಂತೆ ಎಚ್ಚರಿಕೆ ಕೊಡುತ್ತೇನೆ ಎಂದರು.

 

Please follow and like us:

Leave a Reply

Your email address will not be published. Required fields are marked *

Next Post

ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ: ಡಿ.ಕೆ. ಶಿವಕುಮಾರ್

Sat Oct 9 , 2021
ಬೆಂಗಳೂರು: ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ […]

Advertisement

Wordpress Social Share Plugin powered by Ultimatelysocial