ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯ:ಸಚಿವ ಗೋವಿಂದ ಕಾರಜೋಳ

ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯವಾಗಿದೆ. ಈ ಕ್ರಮವನ್ನು ಸರ್ಕಾರ ಎಂದೂ ಮನ್ನಿಸೋದಿಲ್ಲ. ಪುತ್ಥಳಿ ಕೆಡವಿ, ಪುಂಡಾಟ ಮೆರೆದಂತ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ, ವೀರ ಮರಣಹೊಂದಿದಂತ ಮಹಾನಾಯಕ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಆಗಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕೇರಿಸಿದಂತ ವ್ಯಕ್ತಿಯ ಪ್ರತಿಮೆಯನ್ನೇ ವಿಕೃತಗೊಳಿಸಿರೋದು, ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ. ಇದು ಖಂಡನೀಯವೇ ಸರಿ ಎಂದರು.ನಾಡಿನಲ್ಲಿ ಮತ್ತಾರು ಈ ದಷ್ಕೃತ್ಯಕ್ಕೆ ಕೈಹಾಕಬಾರದು. ಇದೀಗ ಪುತ್ಥಳಿ ಕೆಡವಿ ವಿಕೃತಿಗೊಳಿಸಿರುವಂತ ಕಿಡಿಗೇಡಿಗಳ ವಿರುದ್ಧ ಕಾನೂನ ಕ್ರಮ ಕೈಗೊಳ್ಳಲಾಗುತ್ತದೆ. ನಾಡಿನ ಜನರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಂಗಾ ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Sat Dec 18 , 2021
ಗಂಗಾ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು, ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ಮಧ್ಯಾಹ್ನ 1 ಗಂಟೆಗೆ, ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಲು ಶಹಜಹಾನ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ.ಈ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುವ ಪ್ರಮುಖ ಮೂಲ ಯೋಜನೆಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.ಉತ್ತರ […]

Advertisement

Wordpress Social Share Plugin powered by Ultimatelysocial