ಭತ್ಯೆ, ನಿವೃತ್ತಿ ವಯಸ್ಸು, ಪಿಂಚಣಿ ಪರಿಶೀಲನೆ.

ರಚನೆ ಮಾಡಿರುವ 7ನೇ ರಾಜ್ಯ ವೇತನ ಆಯೋಗ ತನ್ನ ಪರಿಶೀಲನಾರ್ಹ ಅಂಶಗಳ ಮೇಲೆ ವರದಿಯನ್ನು ಸಲ್ಲಿಸಬೇಕಾಗಿದೆ.ಈ ಉದ್ದೇಶಕ್ಕಾಗಿ ಆಯೋಗವು ಮೊದಲ ಹಂತದಲ್ಲಿ ಸಾರ್ವಜನಿಕರು, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು, ಮಾನ್ಯತೆ ಪಡೆದ ನೌಕರರ ಸಂಘಗಳು, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಿ ಪ್ರಶ್ನಾವಳಿ ಪ್ರಕಟಿಸಿದೆ. ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು ಮತ್ತು ಇತರೆ ಪ್ರಮುಖ ಚುನಾಯಿತ ಪ್ರತಿನಿಧಿಗಳಿಂದಲೂ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಮತ್ತು ಮುಖ್ಯಸ್ಥರನ್ನೊಳಗೊಂಡಂತೆ ಹಿರಿಯ ಅಧಿಕಾರಿಗಳಿಂದಲೂ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ.  ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪ್ರಶ್ನಾವಳಿ ‘ಎ’ ನಮೂನೆಯಲ್ಲಿ ಉತ್ತರಗಳನ್ನು ಒದಗಿಸಬೇಕಾಗುತ್ತದೆ. ಪ್ರಶ್ನಾವಳಿ ‘ಬಿ’ ಮತ್ತು ‘ಸಿ’ ನಮೂನೆಗಳು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರುಗಳು ಉತ್ತರಗಳನ್ನು ನೀಡುವ ಉದ್ದೇಶಕ್ಕೆ ಇದೆ. ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳು ಪ್ರಶ್ನಾವಳಿ ‘ಡಿ’, ‘ಇ’, ‘ಎಫ್’ ಗಳಲ್ಲಿ ಕ್ರಮವಾಗಿ ಉತ್ತರಗಳನ್ನು ನೀಡಬೇಕಾಗುತ್ತದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪ್ರಶ್ನಾವಳಿ ‘ಜಿ’ ನಮೂನೆಯಲ್ಲಿ ಆಹ್ವಾನಿಸಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.

Mon Jan 23 , 2023
ನವದೆಹಲಿ: ದೇಶಾದ್ಯಂತ ವಿಪರೀತ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಜನವರಿ 24 ರಿಂದ ವ್ಯಾಪಕ ಮಳೆಯಾಗಲಿದೆ. ಪರ್ವತ ಪ್ರದೇಶಗಳಲ್ಲಿ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಮ್ಮು-ಕಾಶ್ಮೀರ, ಉತ್ತರಾಖಂಡ, ಹಿಮಾಚಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಸೇನ್ ರಾಯ್ ಮಾಹಿತಿ ನೀಡಿದ್ದಾರೆ. ಮಂಡಿ, ಕಾಂಗ್ರಾ, […]

Advertisement

Wordpress Social Share Plugin powered by Ultimatelysocial