ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ.

ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು.

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತೀ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1000, 1500, 2000, ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಮೊದಲು ಚಾಲನೆಗೊಳಿಸಿ ಅದನ್ನು ಅನುಷ್ಠಾನ ಗೊಳಿಸಿ, ಪ್ರತಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ಸಹಾಯ ನೀಡಲಾಗುವುದು ಎಂದರು.

ಜನಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವ ಯೋಜನೆಗಳ ಚಿಂತನೆ ಮಾಡುತ್ತಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ. ರೈತರು, ಕಾರ್ಮಿಕರು, ಮಹಿಳೆಯರು ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕ್ಕೆ ಒಂದು ಲಕ್ಷ ನೀಡಿ, ಬ್ಯಾಂಕ್ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ಎಂಡ್ ಟು ಎಂಡ್ ಅಪ್ರೋಚ್ ವುಳ್ಳ ಕಾರ್ಯಕ್ರಮ ಇದಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ.

Sun Jan 15 , 2023
(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊ’ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ. ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆ ಸಂದರ್ಭದಲ್ಲಿ ಇಬ್ಬರೂ […]

Advertisement

Wordpress Social Share Plugin powered by Ultimatelysocial