‘ಗೂಢಚಾರಿ 2’ ಫಸ್ಟ್ ಲುಕ್ ಹಾಗೂ ಪ್ರಿ ವಿಷನ್ ವೀಡಿಯೋ ರಿವೀಲ್

‘ಮೇಜರ್’, ‘ಹಿಟ್ 2’ ಮೂಲಕ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾ ನೀಡಿರುವ ತೆಲುಗು ನಟ ಅಡಿವಿ ಶೇಷ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಸಜ್ಜಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ ಸೀಕ್ವೆಲ್ ನಲ್ಲಿ ಅಡಿವಿ ಶೇಷ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ‘ಗೂಢಚಾರಿ 2’ ಫಸ್ಟ್ ಲುಕ್ ಹಾಗೂ ಪ್ರಿ ವಿಷನ್ ವೀಡಿಯೋ ಇಂದು ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿದೆ.ಪ್ಯಾನ್ ಇಂಡಿಯಾ ನಟನಾಗಿ ಬ್ಯಾಕ್ ಟು ಬ್ಯಾಕ್ ಹಿಟ್ ಕಂಡಿರುವ ಅಡಿವಿ ಶೇಷ್ ನಟನೆಯ ‘ಗೂಢಚಾರಿ 2’ ಸಿನಿಮಾ ಸೆಟ್ಟೇರಿದೆ. ಬಿಗ್ ಬಜೆಟ್ ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರ ಇಂದು ಅಧೀಕೃತವಾಗಿ ಸೆಟ್ಟೇರಿದ್ದು ಫಸ್ಟ್ ಲುಕ್ ಹಾಗೂ ಪ್ರಿ ವಿಷನ್ ವೀಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಅಡಿವಿ ಶೇಷ್ ನ್ಯೂ ಲುಕ್ ಗಮನ ಸೆಳೆಯುತ್ತಿದ್ದು, ಪ್ರಿ ವಿಷನ್ ವೀಡಿಯೋ ಸಿನಿಮಾದ ಅದ್ದೂರಿತನ ಹಾಗೂ ತಾಂತ್ರಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ.ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ಗೆ ಬಂಡವಾಳ ಹೂಡುತ್ತಿರೋದು ವಿಶೇಷ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.ಮೊದಲ ಸೀಕ್ವೆಲ್ ನಲ್ಲಿದ್ದ ಕಲಾವಿದರ ಜೊತೆಗೆ ಒಂದಿಷ್ಟು ಹೊಸ ಪಾತ್ರವರ್ಗ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಸದ್ಯದಲ್ಲೇ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಯಕಿಯಾದರು ಗಾಯಕಿ ಮಂಗ್ಲಿ;

Tue Jan 10 , 2023
ಬೆಂಗಳೂರು: ‘ವಿಕ್ರಾಂತ್ ರೋಣ’, ‘ತ್ರಿಬಲ್ ರೈಡಿಂಗ್’, ‘ದಿಲ್ ಪಸಂದ್’, ‘ವೇದ’ ಸೇರಿದಂತೆ ಕೆಲವು ಕನ್ನಡ ಚಿತ್ರಗಳಲ್ಲಿ ಹಾಡಿರುವ ತೆಲುಗು ಗಾಯಕಿ ಮಂಗ್ಲಿ, ಇದೀಗ ನಾಯಕಿಯಾಗಿ ಸ್ಯಾಂಡಲ್​ವುಡ್ ಡೆಬ್ಯೂ ಮಾಡಲಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ನಿರ್ದೇಶಿಸಲಿರುವ, ನಾಗಶೇಖರ್ ನಾಯಕನಾಗಿರುವ ಪ್ಯಾನ್ ಇಂಡಿಯಾ ‘ಪಾದರಾಯ’ ಚಿತ್ರದ ಮೂಲಕ ಮಂಗ್ಲಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.ಈ ಹಿಂದೆ ಕೆಲವು ತೆಲುಗು ಚಿತ್ರಗಳಲ್ಲಿ ನಟಿಸಿದ್ದರೂ, ಪೂರ್ಣಪ್ರಮಾಣದ ನಾಯಕಿಯಾಗಿ ಅವರಿಗೆ ‘ಪಾದರಾಯ’ ಮೊದಲ ಸಿನಿಮಾ.’ನಾಯಕ ನಾಗಶೇಖರ್ ಸದ್ಯ ಪಾತ್ರಕ್ಕಾಗಿ […]

Advertisement

Wordpress Social Share Plugin powered by Ultimatelysocial