ಗುಜರಾತ್‌ ಪಂಚಾಯಿತಿ: ಚುನಾವಣೆಯಲ್ಲಿ ಒಂದೇ ಮತ ಪಡೆದ ಅಭ್ಯರ್ಥಿ

ಗುಜರಾತ್‌ ಪಂಚಾಯಿತಿ: ಚುನಾವಣೆಯಲ್ಲಿ ಒಂದೇ ಮತ ಪಡೆದ ಅಭ್ಯರ್ಥಿ

ಅಹಮದಾಬಾದ್‌: ಗುಜರಾತ್‌ ರಾಜ್ಯದ ಸ್ಥಳೀಯ ಸಂಸ್ಥೆ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರು ಒಂದೇ ಮತ ಪಡೆದಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂತೋಷ್‌ ಹಲಪಟ್ಟಿ ತಮ್ಮ ಒಂದು ಮತವನ್ನು ಮಾತ್ರ ಪಡೆದಿದ್ದಾರೆ.

ಅವರು ಛಾರವಾಲ ಗ್ರಾಮಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಸಂತೋಷ್‌ ಅವರ ಕುಟುಂಬದಲ್ಲಿ ಒಟ್ಟು 12 ಜನರು ಇದ್ದಾರೆ. ಆದರೆ ಯಾರೂ ಸಂತೋಷ್‌ಗೆ ಮತ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಚುನಾವಣೆಗಳು ಬರುತ್ತವೆ, ಹೋಗುತ್ತವೆ ಇದರಲ್ಲಿ ನಾನು ಸೋತಿರುವುದಕ್ಕೂ ಹಾಗೂ ಮನೆಯವರು ಮತ ನೀಡದಿರುವುದಕ್ಕೂ ಬೇಸರ ಇಲ್ಲ ಎಂದು ಅವರು ಹೇಳಿದ್ದಾರೆ.

ಗುಜರಾತ್‌ ರಾಜ್ಯದಲ್ಲಿ ಇತ್ತೀಚೆಗೆ ಪಂಚಾಯಿತಿ ಚುನಾವಣೆ ನಡೆದಿತ್ತು. ಸುಮಾರು 6 ಸಾವಿರ ಪಂಚಾಯಿತಿಗಳ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಮೇಲುಗೈ ಸಾಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಲೆಯಲ್ಲಿ ಮೊಟ್ಟೆ ನೀಡುವ ಕುರಿತು ವಿದ್ಯಾರ್ಥಿಗಳ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

Wed Dec 22 , 2021
ಕೊಪ್ಪಳ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವೃದ್ಧಿಗಾಗಿ ಸರ್ಕಾರವು ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಯೋಜನೆ ಜಾರಿಗೊಳಿಸಿತ್ತು. ಆದರೆ, ಇದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರಣ, ಅಕ್ಷರ ದಾಸೋಹ ಅಧಿಕಾರಿಗಳು ಮೊಟ್ಟೆ ತಿನ್ನುವ ಕುರಿತು ಸಮೀಕ್ಷೆ ನಡೆಸಿದ್ದರು. ವಿದ್ಯಾರ್ಥಿಗಳು ಮೊಟ್ಟೆ ತಿನ್ನುವ ಕುರಿತು ಈ ಸಮೀಕ್ಷೆ ನಡೆದಿತ್ತು. ಸಮೀಕ್ಷೆಯ ವರದಿಯಂತೆ, ಬಹುಪಾಲು ವಿದ್ಯಾರ್ಥಿಗಳು ಸರ್ಕಾರದ ಯೋಜನೆಯನ್ನು ಇಷ್ಟಪಟ್ಟಿದ್ದಾರೆ. ಸರ್ಕಾರ ನೀಡುತ್ತಿರುವ ಮೊಟ್ಟೆಯನ್ನು ತಮ್ಮ ಮಧ್ಯಾಹ್ನದ ಬಿಸಿಯೂಟದೊಂದಿಗೆ […]

Advertisement

Wordpress Social Share Plugin powered by Ultimatelysocial