ಗುರು ಶ್ರೀ ಅರವಿಂದರು ಅತೀತ ಮಾನಸ ಯೋಗದ ಪ್ರವರ್ತಕರು.

ಗುರು ಶ್ರೀ ಅರವಿಂದರು ಅತೀತ ಮಾನಸ ಯೋಗದ ಪ್ರವರ್ತಕರು. ಈ ಕೆಲಸದಲ್ಲಿ ಅವರಿಗೆ ಸಹಕಾರಿಯಾದವರು ಮುಂದೆ ಶ್ರೀಮಾತೆ ಎಂದು ಪೂಜನೀಯರಾದ ಮೀರಾ ಅಲ್ಫಾಸ ಅವರು. ಅರವಿಂದರಂತೆಯೇ ಸಾಕ್ಷಾತ್ಕಾರಗಳನ್ನು ಪಡೆದುಕೊಂಡ ಶ್ರೀಮಾತೆಯವರು “ಅತೀತ ಮಾನಸಯೋಗವು ಪೃಥ್ವಿಯ ಮುಂದಿನ ವಿಕಸನವನ್ನು ತ್ವರಿತಗೊಳಿಸುವುದೆಂದು” ಪ್ರತಿಪಾದಿಸಿದರು.ಮೀರಾ ಅಲ್ಫಾಸ ಅವರು 1878ರ ಫೆಬ್ರವರಿ 21ರಂದು ಪ್ಯಾರಿಸ್ಸಿನಲ್ಲಿ ಜನಿಸಿದರು. ಮೀರಾ ಅಲ್ಫಾಸಾ ಅವರು ಮೊದಲ ಬಾರಿಗೆ ಪಾಂಡಿಚೇರಿಯ ಅರವಿಂದೋ ಆಶ್ರಮಕ್ಕೆ ಭೇಟಿ ಇತ್ತಿದ್ದು ತಮ್ಮ 36ನೆಯ ವಯಸ್ಸಿನಲ್ಲಿ. ಪಾಶ್ಚಾತ್ಯ ಸಿರಿವಂತ ಕುಟುಂಬದಲ್ಲಿ ವೈಭೋಗದ ಜೀವನ ನಡೆಸುತ್ತಿದ್ದ ದಂಪತಿಗಳ ಪುತ್ರಿಯಾಗಿದ್ದರೂ ಈಕೆ ಬಾಲ್ಯದಿಂದಲೂ ಕೆಲವು ಅಲೌಕಿಕ ಗುಣ ಸಂಪನ್ನರಾಗಿದ್ದರು. ಮೀರಾ ಅವರನ್ನು ಭೇಟಿಯಾದ ಪ್ರಥಮ ಸಂದರ್ಭದಲ್ಲಿಯೇ ಅರವಿಂದರು ಆಕೆಯಲ್ಲಿ ಅಂತರ್ಗತವಾಗಿದ್ದ ಈ ವೈಶಿಷ್ಟ್ಯವನ್ನು ಗುರುತಿಸಿದ್ದರು.
1920ರಲ್ಲಿ ಮಿರಾ ಅವರು ಶಾಶ್ವತವಾಗಿ ಭಾರತದಲ್ಲಿ ನೆಲೆಸುವ ಸಂಕಲ್ಪದೊಡನೆ, ಪಾಂಡಿಚೆರಿ ಆಶ್ರಮದ ಏಳ್ಗೆಗಾಗಿ, ಮತ್ತು ಆ ಮೂಲಕ ಅರವಿಂದರ ‘ಪೂರ್ಣ ಯೋಗ’ ಪ್ರಸರಣಕ್ಕಾಗಿ ಟೊಂಕಕಟ್ಟಿ ನಿಂತರು. ಅರವಿಂದರು ಮೀರಾ ಅವರನ್ನು ತಮಗೆ ಸಮರಾದ ಸಾಧಕಿ ಎಂದೇ ಗೌರವಿಸುತ್ತಿದ್ದರು.ಅರವಿಂದರ ಆಶಯದಂತೆ ಶ್ರೀಮಾತೆಯವರು 1926ರಲ್ಲಿ ಅರವಿಂದೋ ಆಶ್ರಮದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡರು. ಮುಂದಿನ ದಿನಗಳಲ್ಲಿ ಶ್ರೀಮಾತೆಯವರು ‘ಅರವಿಂದೋ ಇಂಟರ್ ನ್ಯಾಶನಲ್ ಸೆಂಟರ್ ಆಫ್ ಎಜುಕೇಷನ್’ ಸಂಸ್ಥೆಯನ್ನು ಆರಂಭಿಸಿ ವಿಶ್ವದಾದ್ಯಂತ ಶಿಕ್ಷಣಾರ್ಥಿಗಳಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಿಕೊಟ್ಟರು. ಅರವಿಂದರು ಇಹಲೋಕ ವ್ಯವಹಾರ ಮುಗಿಸಿ ದೀರ್ಘಸಮಾಧಿಗೆ ತೆರಳಿದ ನಂತರ ಶ್ರೀಮಾತೆಯವರು ಆಶ್ರಮದ ಅನುಯಾಯಿಗಳಿಗೆ ಪಥದರ್ಶಕರಾಗಿ ಮುನ್ನಡೆದರು. ಮನುಕುಲದ ಐಕ್ಯತೆಯ ಸದುದ್ಧೇಶದಿಂದ ಶ್ರೀಮಾತೆಯವರು ಆರಂಭಿಸಿದ ‘ಅರೋವಿಲ್ಲ’ ನಿರ್ಮಾಣಕ್ಕೆ ಯುನೆಸ್ಕೋ ಸಹಾಯ ಹಸ್ತ ಚಾಚಿತು. ಜಗತ್ತಿನ ಎಲ್ಲಾ ಭಾಗದ, ಎಲ್ಲಾ ವರ್ಗದ, ಎಲ್ಲಾ ವಿಧದ ಜನರು ಶಾಂತಿ-ಸೌಹಾರ್ದದಿಂದ ಬಾಳಬೇಕು ಎನ್ನುವುದು ಈ ನಿರ್ಮಾಣದ ಹಿಂದಿನ ಉದ್ಧೇಶವಾಗಿದೆ. 1968ರಲ್ಲಿ ಉದ್ಘಾಟನೆಗೊಂಡ ‘ಅರೋವಿಲ್ಲ’ ಉದ್ಘಾಟನಾ ಸಮಾರಂಭದಲ್ಲಿ 121 ದೇಶಗಳ ಮತ್ತು ಭಾರತದ ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ತಮ್ಮ ತಮ್ಮ ಪ್ರಾಂತ್ಯದಿಂದ ಒಂದು ಮುಷ್ಠಿ ಮಣ್ಣನ್ನು ತಂದು ಆ ಪ್ರದೇಶದಲ್ಲಿ ಸಂಗಮಗೊಳಿಸಿದರು. ಇಂದಿಗೆ ‘ಅರೋವಿಲ್ಲ’ ಪ್ರದೇಶದಲ್ಲಿ 35 ರಾಷ್ಟ್ರಗಳ ಸುಮಾರು 1700ಜನರು ನೆಲೆಸಿರುವರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಾದಾಸಾಹೇಬ್ ಫಾಲ್ಕೆ 2023: ಬೆಸ್ಟ್ ಸಿನಿಮಾ, ಬೆಸ್ಟ್ ಆಕ್ಟರ್ ಪ್ರಶಸ್ತಿ ಯಾರಿಗೆ?

Wed Feb 22 , 2023
ಭಾರತ ಚಲನಚಿತ್ರರಂಗದಲ್ಲಿ ವರ್ಷಕ್ಕೊಮ್ಮೆ ಉತ್ತಮವಾಗಿ ಕೆಲಸ ನಿರ್ವಹಿಸಿದ ಕಲಾವಿದರು ಹಾಗೂ ಉತ್ತಮವಾಗಿ ಮೂಡಿ ಬಂದ ಚಿತ್ರಗಳಿಗೆ ತಕ್ಕ ಗೌರವ ಸಲ್ಲಿಸುವ ಸಲುವಾಗಿ ಹಲವು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಅದೇ ರೀತಿ 2012ರಲ್ಲಿ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಅನ್ನೂ ಸಹ ಸ್ಥಾಪಿಸಲಾಯಿತು. ಹೀಗೆ 2012ರಲ್ಲಿ ಸ್ಥಾಪಿತವಾದ ಈ ಪ್ರಶಸ್ತಿ ಪ್ರದಾನ ಯೋಜನೆಯನ್ನು 2016ರಿಂದ ಚಾಲ್ತಿಗೆ ತರಲಾಯಿತು. 2016ರಿಂದ ಪ್ರತಿ ವರ್ಷ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ […]

Advertisement

Wordpress Social Share Plugin powered by Ultimatelysocial