ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಲ್ಲು ತೂರಾಟ,

 

ಹುಬ್ಬಳ್ಳಿ, ಏ.18- ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಲ್ಲು ತೂರಾಟ, ದಾಂಧಲೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಗಲಭೆ ಕುರಿತು ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ ಅವರಿಂದ ಮಾಹಿತಿ ಪಡೆದರು.

ನಂತರ ಕೆಲ ಸಂಘಟನೆಗಳ ಪ್ರಮುಖರು ಗೃಹ ಸಚಿವರನ್ನು ಭೇಟಿಯಾಗಿ ಪೊಲೀಸ್ ಠಾಣೆ, ದೇವಸ್ಥಾನ, ಆಸ್ಪತ್ರೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಭಯದ ವಾತಾವರಣ ಸೃಷ್ಟಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಗಲಭೆಯಲ್ಲಿ ಪಾಲ್ಗೊಂಡಿದ್ದವರನ್ನು ಗುರುತಿಸಿ ಬಂಸಲಾಗುತ್ತಿದೆ. ನಗರದಲ್ಲಿ ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಲ್ಲರೂ ಶಾಂತಿ ಕಾಪಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಭೆ ನಂತರ ಸುದ್ದಿಗಾರರಗೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಲ್ಲು ತೂರಾಟ ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪರೆಡ್ಡಿ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ.

ಪ್ರಕರಣದಲ್ಲಿ ಪಾಲ್ಗೊಂಡಿದ್ದವರು ಯಾವ ಮತೀಯ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಗಲಭೆ ಹಿನ್ನೆಲೆ ಏನು ಎನ್ನುವ ಸಂಪೂರ್ಣ ತನಿಖೆಯಾಗಲಿದೆ. ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ಹೆಚ್.ಡಿ.ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ಧಹಸ್ತ.

Mon Apr 18 , 2022
ಬೆಂಗಳೂರು, ಏ.18-ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ಧಹಸ್ತ. ನೀವೇ ಪರ್ಸೆಂಟೇಜ್ ವ್ಯವಹಾರದ ಪಿತಾಮಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್‍ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ […]

Advertisement

Wordpress Social Share Plugin powered by Ultimatelysocial