ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

 

ಬೆಂಗಳೂರು: ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕೇಂದ್ರ ಸರ್ಕಾರ ಯೂಕ್ರೇನ್​ನಿಂದ ವಿದ್ಯಾರ್ಥಿಗಳನ್ನು ಏರ್​ಲಿಫ್ಟ್‌ ಮಾಡಿದೆ ಎಂಬುದೇನೋ ಸರಿ.

ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಗತಿಯೇನು? ಎಂದು ಸರಣಿ ಟ್ವೀಟ್​ ಮೂಲಕ ಕೇಳಿದ್ದಾರೆ.

ಪೋಷಕರು ಸಾಲ ಮಾಡಿ ಮಕ್ಕಳನ್ನು ಯೂಕ್ರೇನ್​ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 2,65,720 ಕೋಟಿ ರೂ.ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಲಿ. ನೀಟ್‌ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎಂದು ಎಚ್​ಡಿಕೆ ಸಲಹೆ ಕೊಟ್ಟಿದ್ದಾರೆ.

‘ವೈದ್ಯೋ ನಾರಾಯಣೋ ಹರಿಃʼಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು? ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು? ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿ ಅತ್ಯಾಚಾರದ ಕುರಿತಾದ ಟ್ವೀಟ್​ ವಿವಾದಕ್ಕೊಳಗಾದ ಬಳಿಕ ರಾಹುಲ್​ ಗಾಂಧಿ!

Mon Mar 7 , 2022
ದೆಹಲಿ ಅತ್ಯಾಚಾರದ ಕುರಿತಾದ ಟ್ವೀಟ್​ ವಿವಾದಕ್ಕೊಳಗಾದ ಬಳಿಕ ರಾಹುಲ್​ ಗಾಂಧಿ ಬರೋಬ್ಬರಿ ಐದು ತಿಂಗಳುಗಳ ಕಾಲ ಟ್ವಿಟರ್​ನಲ್ಲಿ ಫಾಲೋವರ್ಸ್​ನ್ನು ಕಳೆದುಕೊಂಡಿದ್ದಾರೆ. ಆದರೆ ಇದೀಗ ರಾಹುಲ್ ಗಾಂಧಿಗೆ ವಾರಕ್ಕೆ ಸುಮಾರು 80 ಸಾವಿರ ದರದಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚುತ್ತಿದೆ.ತಮ್ಮ ಫಾಲೋವರ್ಸ್ ಸಂಖ್ಯೆ ಇಳಿಕೆಯಾದ ಬಗ್ಗೆ ಆಕ್ರೋಶ ಹೊರಹಾಕಿದ್ದ ರಾಹುಲ್​ ಗಾಂಧಿ ಇದು ಮೋದಿ ಸರ್ಕಾರದ ರಾಜಕೀಯ ಒತ್ತಡದ ಪರಿಣಾಮವಾಗಿದೆ ಎಂದು ಡಿಸೆಂಬರ್​ 27ರಂದು ಆರೋಪಿಸಿದ್ದರು. ಜನವರಿ 12ರಿಂದ ಆರು ವಾರಗಳಲ್ಲಿ ರಾಹುಲ್​ […]

Advertisement

Wordpress Social Share Plugin powered by Ultimatelysocial