ಹಾಸನದಲ್ಲಿ ಮದುವೆಯಾದ ಮೂರನೇ ವಾರಕ್ಕೆ ಮದುಮಗಳ ಸಾವು

Dowry Harassment: ಹಾಸನದಲ್ಲಿ ಮದುವೆಯಾದ ಮೂರನೇ ವಾರಕ್ಕೆ ಮದುಮಗಳ ಸಾವು
ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ ಎಂದು ಫಿಜಾ ಖಾನಂ ಪೋಷಕರು ಆರೋಪಿಸಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳ, ವರದಕ್ಷಿಣೆ ಸಾವು ಆರೋಪದಲ್ಲಿ ಕೇಸ್ ದಾಖಲಾಗಿದೆ.

ಹಾಸನ: ಮದುವೆಯಾದ ಮೂರನೇ ವಾರಕ್ಕೆ ಮದುಮಗಳು ಸಾವಿಗೀಡಾಗಿದ್ದಾಳೆ. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಆ ಮದುಮಗಳ ಪೋಷಕರು ಆರೋಪ ಮಾಡಿದ್ದಾರೆ. ಹಾಸನದ ಸಲೀಂ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಫಿಜಾ ಖಾನಂ (22) ಮೃತ ಮಹಿಳೆ. ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ಅವಿರಿಬ್ಬರಿಗೂ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆ ಫಿಜಾ ಖಾನಂ ಅನುಮಾನಾಸ್ಪದ ಸಾವು ಕಂಡಿದ್ದಾಳೆ.

ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ ಎಂದು ಫಿಜಾ ಖಾನಂ ಪೋಷಕರು ಆರೋಪಿಸಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳ, ವರದಕ್ಷಿಣೆ ಸಾವು ಆರೋಪದಲ್ಲಿ ಕೇಸ್ ದಾಖಲಾಗಿದೆ. ಅಳಿಯ ಶಾಗಿಲ್ ಅಹಮದ್ ಸೇರಿದಂತೆ ಆತನ ಸಹೋದರರು ಮತ್ತು ಶಾಗಿಲ್ ತಾಯಿಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಪೆನ್ಷನ್ ಮೊಹಲ್ಲಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮದ್ದು ಗುಂಡುಗಳಿಂದ ಕೌಟುಂಬಿಕ ಕಲಹ
ಬೆಂಗಳೂರಿನಲ್ಲೊಂದು ವಿಲಕ್ಷಣ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಮದ್ದುಗುಂಡು ಕಾರಣವೆಂಬ ಅಪನಂಬಿಕೆ ಸೃಷ್ಟಿಯಾಗಿದೆ. ಮನೆಯಲ್ಲಿದ್ದ ಮದ್ದು ಗುಂಡುಗಳಿಂದ ಕೌಟುಂಬಿಕ ಕಲಹವೆಂದು ಮದ್ದು ಗುಂಡುಗಳನ್ನು ಗುಂಡಿ ತೋಡಿ ಮಹಿಳೆ ಹೂತಿಟ್ಟ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಹೋಟೆಲ್ ಪಾರ್ಕಿಂಗ್ ಸ್ಥಳದಲ್ಲಿ ಮಹಿಳೆ ಮದ್ದು ಗುಂಡುಗಳನ್ನು ಹೂತಿಟ್ಟಿದ್ದಾರೆ. ಹೋಟೆಲ್ ಸಿಬ್ಬಂದಿಗೆ ಒಂದು ಮದ್ದು ಗುಂಡು ಸಿಕ್ಕ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆದಿದ್ದು ಈ ವೇಳೆ ಮತ್ತೊಂದು ಮದ್ದು ಗುಂಡು ಪತ್ತೆಯಾಗಿತ್ತು.

ಬಳಿಕ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದಾಗ ಮಹಿಳೆಯೊಬ್ಬರು ಗುಂಡು ಹೂತಿಟ್ಟಿರುವುದು ಪತ್ತೆಯಾಗಿದೆ. ಏರ್ ಪೋರ್ಸ್ ನಿವೃತ್ತ ಗ್ರೂಪ್ ಕ್ಯಾಪ್ಟನ್ ಪತ್ನಿಯಾಗಿರುವ ಮಹಿಳೆಯನ್ನು ವಿಚಾರಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತಿಯ ಬಳಿ ಲೈಸೆನ್ಸ್ ಗನ್ ಇತ್ತು, ಅದನ್ನು ಮಾರಿದ್ದರು. ಆದರೆ ಮದ್ದು ಗುಂಡುಗಳು ಮಾತ್ರ ಮನೆಯಲ್ಲಿಯೇ ಇತ್ತು. ಅದರಿಂದ ನನ್ನ ಪುತ್ರನ ಸಾಂಸಾರಿಕ ಜೀವನ ಹಾಳಾಗಿತ್ತು. ಹೀಗಾಗಿ ಆ ಮದ್ದು ಗುಂಡು ಹೂತಿಟ್ಟಿರುವುದಾಗಿ ಮಹಿಳೆ ಹೇಳಿಕೆ ನೀಡಿದ್ದಾಳೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

10 ಮತಗಳ ಅಂತರದಿಂದ ಸೋತ ಬಳಿಕ ಕುಸಿದು ಬಿದ್ದ ಚುನಾವಣಾ ಅಭ್ಯರ್ಥಿ

Wed Dec 22 , 2021
ಗುಜರಾತ್​​ನ ನರ್ಮದೆಯ ಚಿತ್ರಾಡ ಗ್ರಾಮ ಪಂಚಾಯತ್​​ನಲ್ಲಿ ಸರಪಂಚ್​ ಸ್ಥಾನಕ್ಕೆ ಸ್ಪರ್ಧಿಸಿದ್ದ ವಾಸುದೇವ್​ ವಾಸವ ಅವರ ಪತ್ನಿ ಅಶ್ಮಿತಾ ಬೆನ್​ ವಾಸವ ಅವರು ಚುನಾವಣೆಯಲ್ಲಿ ಕೇವಲ 10 ಮತಗಳಿಂದ ಸೋಲನ್ನು ಅನುಭವಿಸಿದ ಬಳಿಕ ಮತ ಎಣಿಕೆ ಕೇಂದ್ರದಲ್ಲಿಯೇ ಕುಸಿದು ಬಿದ್ದ ಘಟನೆಯು ವರದಿಯಾಗಿದೆ. ಅಶ್ಮಿತಾ ಬೆನ್​ ವಾಸವ ಕುಸಿದು ಬೀಳುತ್ತಿದ್ದಂತೆಯೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದ್ದು ಚಿಕಿತೆಗೆ ಸ್ಪಂದಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾ ಆಯೋಗ […]

Advertisement

Wordpress Social Share Plugin powered by Ultimatelysocial