ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಹರಜಾತ್ರೆಯ ಸಂಭ್ರಮ

ಹರಿಹರದ ಪಂಚಮಸಾಲಿ ಗುರುಪೀಠದಲ್ಲಿ ಹರಜಾತ್ರಾ ಮಹೋತ್ಸವ ಹಾಗೂ  ಬೃಹತ್ ಜನಜಾಗೃತಿ ಸಮಾವೇಶಕ್ಕೆ ಸಂಭ್ರಮದ ಚಾಲನೆ ದೊರೆತಿದೆ.ಇಂದು ಬೆಳಗ್ಗೆಹರಿಹರ ಬೈಪಾಸ್ ರಸ್ತೆಯಿಂದ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಾದ್ಯಮೇಳದೊಂದಿಗೆ ಸಮಾಜದ ಮಹಿಳೆಯರು ಪೂರ್ಣಕುಂಭ ಹೊತ್ತು ರೊಟ್ಟಿ ಬುತ್ತಿ ಮೆರವಣಿಗೆಯನ್ನು ನಡೆಸಿದರು.ಮೆರವಣಿಗೆಯಲ್ಲಿ ಪಂಚಮಸಾಲಿ ಸಮಾಜ ಬಾಂಧವರು ಭಾಗವಹಿಸಿದ್ದರುನಂತರ ಮೆರವಣಿಗೆಯು ಸಮಾವೇಶ ನಡೆಯುವ ಸ್ಥಳವನ್ನು ತಲುಪಿತು.ಬಳಿಕ ಸಮಸ್ತ ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಕೇಂದ್ರದಲ್ಲಿ ಓಬಿಸಿ ಹಾಗೂ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಬೃಹತ್ ಜನ ಜಾಗೃತಿ ಸಮಾವೇಶ ಜರುಗಿತು.ಈ ವೇಳೆ ಶ್ರೀ ಮಹಾದೇವ ಸ್ವಾಮೀಜಿ, ಶ್ರೀ ನಿರಂಜನಾನಂದಪುರಿ,ಶ್ರೀ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮಿ, ಶ್ರೀ ಮಹಾಂತ ಸ್ವಾಮಿಗಳು ಹಾಗೂ ಶ್ರೀ ಸಂಗನಬಸವ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಪಾಟೀಲ್ ಉದ್ಘಾಟನೆ ನೆರವೇರಿಸಿದರು.ಸಂಘದ ಗೌರವಾಧ್ಯಕ್ಷ ಬಾವಿ ಬೆಟ್ಟಪ್ಪ, ಅಧ್ಯಕ್ಷತೆ ವಹಿಸಿದ್ದರು, ನಿಕಟಪೂರ್ವ ರಾಜ್ಯಾಧ್ಯಕ್ಷ ಡಾ. ಬಸವರಾಜ್ ದಿಂಡೂರು ಜನಜಾಗೃತಿ ನುಡಿಗಳನ್ನಾಡಿದರು.ಮುಖ್ಯ ಅತಿಥಿಗಳಾಗಿ ಸಿ.ಸಿ. ಪಾಟೀಲ್, ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ಸಂಗಣ್ಣ ಕರಡಿ  ಶ್ರೀ ಪೀಠದ ಪ್ರಧಾನ ಧರ್ಮದರ್ಶಿ  ಬಿ.ಸಿ. ಉಮಾಪತಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.ಈಗಾಗಲೇ ಸಕಲ ಸಿದ್ದತೆಗಳ ಬಗ್ಗೆ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಮಾಧ್ಯಮದವರೊಂದಿಗೆ ಮಾತನಾಡಿದ್ದು ಹರಜಾತ್ರಾ ಮಹೋತ್ಸವದಲ್ಲಿ ಸುಮಾರು 2 ಲಕ್ಷ ಜನರು ನಾಡಿನ ವಿವಿಧೆಡೆಯಿಂದ ಆಗಮಿಸಲಿದ್ದಾರೆಂದರು. ಸುಮಾರು 50 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. 250 ಬಾಣಸಿಗರಿಂದ ದಾಸೋಹದ ಸಿದ್ಧತೆ ಮಾಡಲಾಗಿದೆ.೧೫ ಕ್ವಿಂಟಾಲ್ ಬೂಂದಿ ಲಾಡು,೨೫ ಸಾವಿರ ರೊಟ್ಟಿ ತಯಾರಿಸಲಾಗಿದೆ.ದಾಸೋಹದಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ೧೮ ಕೌಂಟರ್ ಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಿಯಾಂಕ‌ ಆಗಮನದಿಂದ ರಾಜಕೀಯ ವಲಯದಲ್ಲಿ ಬದಲಾವಣೆ

Sat Jan 14 , 2023
ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಳ್ಳಲಿರುವ ಎ.ಐ.ಸಿ.ಸಿ‌. ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮನದಿಂದ ರಾಜ್ಯದ ಮಹಿಳೆಯರಿಗೂ ನಾಯಕತ್ವದ ಅವಕಾಶ ಸಿಗಲಿದೆ ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಹೇಳಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾ ನಾಯಕಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಹಿಳಾ ನಾಯಕತ್ವಕ್ಕೂ ಕಾಂಗ್ರೆಸ್  ಪಕ್ಷಕ್ಕೂ ಅವಿನಾಭಾವ ಸಂಬಂಧವಿದೆ ಮಾಜಿ ಪ್ರಧಾನ‌‌ಮಂತ್ರಿ ಇಂದಿರಾ ಗಾಂಧೀ ಪಕ್ಷದ ನೇತೃತ್ವ ವಹಿಸಿದಾಗ ಅವರೇ ಅಧಿಕಾರ ಹಿಡಿದು ಸುದೀರ್ಘ ಆಡಳಿತ ನೆಡೆಸಿದ್ದರು  […]

Advertisement

Wordpress Social Share Plugin powered by Ultimatelysocial