IPL:ಆ ತಂಡದ ಪರ ಆಡಬೇಕು, ಅವರು ನನ್ನನ್ನು ಖರೀದಿಸಲಿ ಎಂದು ಕಾಯುತ್ತಿದ್ದೇನೆ ಎಂದ ರಾಯುಡು

ಮುಂದಿನ ವರ್ಷ ನಡೆಯಲಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಾಕಷ್ಟು ವಿಷಯಗಳಿಂದ ವಿಶೇಷವೆನಿಸಿಕೊಳ್ಳುತ್ತಿದೆ. ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿದ್ದು, ಇದಕ್ಕೆಲ್ಲಾ ಕಾರಣ 2 ನೂತನ ಫ್ರಾಂಚೈಸಿಗಳ ಸೇರ್ಪಡೆಯಾಗುತ್ತಿರುವುದು.

ಹೌದು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಕೂಡ ಕಣಕ್ಕಿಳಿಯಲಿದ್ದು ಟ್ರೋಫಿಗಾಗಿ ಒಟ್ಟು ಹತ್ತು ತಂಡಗಳ ನಡುವೆ ಸೆಣಸಾಟ ನಡೆಯಲಿದೆ.

ಈಗಾಗಲೇ ಲಕ್ನೋ ಮತ್ತು ಅಹಮದಾಬಾದ್ ಫ್ರಾಂಚೈಸಿಗಳ ಘೋಷಣೆಯಾಗಿದ್ದು ಈ ಫ್ರಾಂಚೈಸಿಗಳು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದರಿಂದ ಅಸ್ತಿತ್ವದಲ್ಲಿರುವ 8 ಫ್ರಾಂಚೈಸಿಗಳು ತಮಗೆ ಬೇಕಾದ ಗರಿಷ್ಠ 4 ಆಟಗಾರರನ್ನು ರಿಟೈನ್ ಮಾಡಿಕೊಂಡು ಉಳಿದ ಆಟಗಾರರನ್ನು ಟೂರ್ನಿ ಆರಂಭಕ್ಕೂ ಮುನ್ನ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಮೆಗಾ ಹರಾಜು ಪ್ರಕ್ರಿಯೆಗೆ ಕಳುಹಿಸಿವೆ. ಹೀಗೆ ರಿಟೆನ್ಷನ್ ಪ್ರಕ್ರಿಯೆಯಲ್ಲಿ ತಮ್ಮ ಫ್ರಾಂಚೈಸಿಗಳಿಂದ ರಿಟೈನ್ ಆಗದೇ ನಾಯಕತ್ವದ ಗುಣಗಳುಳ್ಳ ಹಲವಾರು ಆಟಗಾರರು ಮತ್ತು ಚುಟುಕು ಕದನಗಳಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸುವ ಪವರ್ ಹಿಟ್ಟರ್ಸ್ ಕೂಡ ಹೊರಬಿದ್ದಿದ್ದಾರೆ.

ಹೀಗೆ ಈ ಬಾರಿಯ ರಿಟೆನ್ಷನ್ ಪ್ರಕ್ರಿಯೆಯಲ್ಲಿ ತನ್ನ ಫ್ರಾಂಚೈಸಿಯಿಂದ ರಿಟೈನ್ ಆಗದೇ ಹೊರಬಿದ್ದಿರುವ ಪವರ್ ಹಿಟ್ಟರ್ಸ್ ಸಾಲಿನಲ್ಲಿ ಅಂಬಾಟಿ ರಾಯುಡು ಕೂಡ ನಿಲ್ಲುತ್ತಾರೆ. ಹೌದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಭಾಗವಾಗಿದ್ದ ಅಂಬಾಟಿ ರಾಯುಡು ರಿಟೈನ್ ಆಗದೇ ಇದೀಗ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನನ್ನು ರಿಟೆನ್ಷನ್ ಪ್ರಕ್ರಿಯೆಯಲ್ಲಿ ಕೈ ಬಿಟ್ಟಾಗಿನಿಂದ ಇದುವರೆಗೂ ಮಾತನಾಡದೇ ಇದ್ದ ಅಂಬಾಟಿ ರಾಯುಡು ಇದೀಗ ಮೆಗಾ ಹರಾಜಿನ ಕುರಿತು ಮಾತನಾಡಿದ್ದು ತಾನು ಯಾವ ತಂಡದ ಪರ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಆಡಲು ಇಚ್ಛಿಸುತ್ತಿದ್ದೇನೆ ಎಂಬ ವಿಷಯವನ್ನು ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ.

ಈ ತಂಡದ ಪರ ಕಣಕ್ಕಿಳಿಯಲು ಒಲವಿದೆ ಎಂದ ಅಂಬಾಟಿ ರಾಯುಡು:ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜು ಕುರಿತು ಮಾತನಾಡಿರುವ ಅಂಬಾಟಿ ರಾಯುಡು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ತಾನು ಪ್ರತಿನಿಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವೇ ಮತ್ತೊಮ್ಮೆ ಆಡಬೇಕು ಎಂದು ಅಂಬಾಟಿ ರಾಯುಡು ಹೇಳಿಕೊಂಡಿದ್ದಾರೆ.

ಫ್ರಾಂಚೈಸಿ ಜತೆ ಸಂಪರ್ಕವಿಲ್ಲ ಆದರೆ ಮೆಗಾ ಹರಾಜಿನಲ್ಲಿ ನನ್ನನ್ನು ಖರೀದಿಸುವ ಭರವಸೆ ಇದೆ: ರಾಯುಡು

ಇನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಬೇಕು ಎಂದಿರುವ ಅಂಬಾಟಿ ರಾಯುಡು ಮೆಗಾ ಹರಾಜಿನ ಕುರಿತಾಗಿ ಇದುವರೆಗೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಜೊತೆ ಯಾವುದೇ ರೀತಿಯ ಸಂಪರ್ಕವನ್ನು ಬೆಳೆಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾಗೂ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನನ್ನು ಖರೀದಿಸಲಿದೆ ಎನ್ನುವ ಭರವಸೆ ನನಗಿದೆ ಎಂದು ಅಂಬಾಟಿ ರಾಯುಡು ಹೇಳಿಕೊಂಡಿದ್ದಾರೆ.

2019ರಲ್ಲಿ ನನ್ನ ಬೆಂಬಲಕ್ಕೆ ನಿಂತದ್ದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ:

ಇನ್ನು 2019ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದಾಗ ಅಂಬಾಟಿ ರಾಯುಡು ಅವರಿಗೆ ಸ್ಥಾನವನ್ನು ಬಿಸಿಸಿಐ ನೀಡಿರಲಿಲ್ಲ. ಆ ಸಂದರ್ಭದಲ್ಲಿ ತೀವ್ರ ಬೇಸರಕ್ಕೆ ಒಳಗಾಗಿದ್ದ ತನ್ನ ಬೆಂಬಲಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಿಲ್ಲುವುದರ ಮೂಲಕ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿತು ಎಂದು ಅಂಬಾಟಿ ರಾಯುಡು ಹೇಳಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

KING KHAN:ನನ್ನ ಪೈಜಾಮ ಮಾರಿಯಾದರೂ ಧೋನಿಯನ್ನು ಖರೀದಿಸಲು ಸಿದ್ಧ ಎಂದಿದ್ದ ಶಾರುಖ್

Tue Dec 28 , 2021
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯ ನಂತರವೂ ಬಹಳ ಜನಪ್ರಿಯರಾಗಿದ್ದಾರೆ ಮತ್ತು ಎಲ್ಲರೂ ಅವರನ್ನು ವಿಶ್ವದ ಅತ್ಯುತ್ತಮ ನಾಯಕ ಎಂದು ಪರಿಗಣಿಸುತ್ತಾರೆ. 40ರ ಹರೆಯದಲ್ಲಿಯೂ ಕಳೆದ ಐಪಿಎಲ್ ಋತುವಿನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಬಾರಿಯೂ ಸಹ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ಸೀಸನ್‌ಗಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಆದರೆ, […]

Advertisement

Wordpress Social Share Plugin powered by Ultimatelysocial