ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ:ಹೆಚ್.ಡಿ ಕುಮಾರಸ್ವಾಮಿ

 

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಹಾ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ ಎಂದಿದ್ದಾರೆ.

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? ಎಂದು ಪ್ರಶ್ನಿಸಿದ್ದಾರೆ..ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಶಾಸಕ ರಾಮಣ್ಣ ಲಮಾಣಿ ಪರಿಹಾರದ ಚೆಕ್ ವಿತರಣೆ

Sun Dec 19 , 2021
ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಶಾಸಕ ರಾಮಣ್ಣ ಲಮಾಣಿ ಕೊರೋನದಿಂದ ಪಟ್ಟ ಮೃತಪಟ್ಟ ಕುಟುಂಬಗಳಿಗೆ ಸರಕಾರದಿಂದ ಬಂದ ಪರಿಹಾರ ಧನ 1 ಲಕ್ಷ ರೂಪಾಯಿಯ ಚೆಕ್ಕನ್ನು ಕೊರೊನದಿಂದ ಮೃತಪಟ್ಟ ಕುಟುಂಬಕ್ಕೆ ವಿತರಿಸಿದರು. ತಾಲೂಕಿನಲ್ಲಿ ಕೊರೋನ ಸೊಂಕಿನಿಂದ 69 ಕುಟುಂಬಗಳ ಪೈಕಿ ಅದರಲ್ಲಿ ಸದ್ಯಕ್ಕೆ 29 ಜನರು ಮೃತಪಟ್ಟವರಿಗೆ ಪರಿಹಾರ ಬಂದಿದೆ. ಗದಗ ಜೀಮ್ಸ್ ನಲ್ಲಿ ಅಧಿಕೃತವಾಗಿ ಬಂದ ಮಾಹಿತಿ ಪ್ರಕಾರ 29 ಕುಟುಂಬಗಳಿಗೆ ಪರಿಹಾರ ಚೆಕ್ ಬಂದಿದೆ ಅದರಲ್ಲಿ 17 […]

Advertisement

Wordpress Social Share Plugin powered by Ultimatelysocial