ಮಧುಮೇಹಿಗಳಿಗೆ ಬೆಸ್ಟ್ ಈ ಹಿಟ್ಟಿನ ಚಪಾತಿ! ಹೀರಿಕೊಳ್ಳುತ್ತದೆ ರಕ್ತದಲ್ಲಿನ ಸಕ್ಕರೆ!

 

 

ಬೆಂಗಳೂರು : ಮಧುಮೇಹ ರೋಗಿಗಳು ಸಾಮಾನ್ಯವಾಗಿ ತಾವು ಸೇವಿಸುವ ಆಹಾರದ ಬಗ್ಗೆ ಗೊಂದಲಕ್ಕೆ ಒಳಗಾಗಿರುತ್ತಾರೆ. ಯಾಕೆಂದರೆ ಯಾವ ಆಹಾರವನ್ನು ಸೇವಿಸಿದರೆ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆಯೋ ಅದೇ ಆಹಾರವನ್ನು ಇವರು ಸೇವಿಸಬೇಕಾಗುತ್ತದೆ. ಒರಟು ಧಾನ್ಯಗಳು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ.

ಅವುಗಳು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತವೆ ಮತ್ತು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಒರಟು ಧಾನ್ಯಗಳು ಪ್ರಯೋಜನಕಾರಿ ಎಂದು ಅನೇಕ ಸಂಶೋಧನೆಗಳಲ್ಲಿ ಕೂಡಾ ಸಾಬೀತಾಗಿದೆ. ಹೀಗಾಗಿ ಈ ಧಾನ್ಯಗಳ ಹಿಟ್ಟಿನಿಂದ ಮಾಡಿದ ಚಪಾತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಿಸುವುದು ಸಾಧ್ಯವಾಗುತ್ತದೆ.

ಬಾರ್ಲಿ ಹಿಟ್ಟು
ಬಾರ್ಲಿ ಹಿಟ್ಟುಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಬಾರ್ಲಿ ಹಿಟ್ಟಿನಿಂದ ಮಾಡಿದ ಚಪಾತಿಯನ್ನು ಯಾವುದೇ ಯೋಚನೆ ಇಲ್ಲದೆ ಸೇವಿಸಬಹುದು. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ, ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ.

ರಾಗಿ ಹಿಟ್ಟು
ರಾಗಿ ಹಿಟ್ಟು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ರಾಗಿ ಹಿಟ್ಟಿನಿಂದ ಮಾಡಿದ ಚಪಾತಿಯನ್ನು ತಿನ್ನುವುದರಿಂದ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಈ ಕಾರಣದಿಂದಾಗಿ, ಹೆಚ್ಚು ಆಹಾರವನ್ನು ಸೇವಿಸುವ ಅಗತ್ಯವಿರುವುದಿಲ್ಲ. ಇದರಿಂದ ತೂಕ ನಿಯಂತ್ರಣ ಕೂಡಾ ಸಾಧ್ಯವಾಗುತ್ತದೆ.

ಓಟ್ಸ್ ಹಿಟ್ಟು
ಓಟ್ಸ್‌ನಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನುನಿಯಂತ್ರಣದಲ್ಲಿಡುತ್ತದೆ. ಇದಲ್ಲದೆ, ಇದು ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ತೂಕವನ್ನು ಕಡಿಮೆ ಮಾಡಲು ಕೂಡಾ ಸಹಾಯ ಮಾಡುತ್ತದೆ. 100 ಗ್ರಾಂ ಓಟ್ಸ್‌ನಲ್ಲಿ ದೇಹವು 68 ಕ್ಯಾಲೊರಿಗಳನ್ನು ಮತ್ತು 21 ಗ್ರಾಂ ಫೈಬರ್ ಅನ್ನು ಪಡೆಯುತ್ತದೆ. ಅದಕ್ಕಾಗಿಯೇ ಓಟ್ಸ್ ಹಿಟ್ಟಿನಿಂದ ಮಾಡಿದ ಚಪಾತಿ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಜೋಳದ ಹಿಟ್ಟು
ಮಧುಮೇಹ ರೋಗಿಗಳಿಗೆ ಜೋಳದ ಹಿಟ್ಟು ಉತ್ತಮ ಆಯ್ಕೆಯಾಗಿದೆ. ಇದು ಫೈಬರ್, ಕಾರ್ಬೋಹೈಡ್ರೇಟ್ ಗಳು ಮತ್ತು ಆಂಟಿಆಕ್ಸಿಡೆಂಟ್ ಗಳಲ್ಲಿ ಸಮೃದ್ದವಾಗಿದೆ. ಇದರ ಗ್ಲೈಸೆಮಿಕ್ ಸೂಚ್ಯಂಕ ಕೂಡಾ ಕಡಿಮೆ. ಇದರಿಂದಾಗಿ ಸಕ್ಕರೆ ಮಟ್ಟವು ಇದ್ದಕ್ಕಿದ್ದಂತೆ ಹೆಚ್ಚಾಗುವುದಿಲ್ಲ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹೆಚ್ಚಾಗಿ ಮೀನು ತಿನ್ನುವವರೇ ಎಚ್ಚರ!

Tue Jan 24 , 2023
ನವದೆಹಲಿ: ನೀವು ಆರೋಗ್ಯಕರ ಆಹಾರಕ್ರಮ ಅನುಸರಿಸಲು ಪ್ರಯತ್ನಿಸುತ್ತಿದ್ದರೆ, ಮೀನು ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಮೀನುಗಳು ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತವೆ. ಇದಲ್ಲದೆ ಒಮೆಗಾ -3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ ಮತ್ತು ಇತರ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಆದರೆ ನಾವೀಗ ಹೇಳುತ್ತಿರುವ ವಿಷಯ ಕೇಳಿದ್ರೆ ಮೀನು ತಿನ್ನಲು ಇಷ್ಟಪಡುವವರಿಗೆ ಶಾಕ್ ಆಗಬಹುದು. ಮೀನು ಸೇವಿಸಿದರೂ ಅನೇಕ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿವೆಯಂತೆ. ಎನ್ವಿರಾನ್ಮೆಂಟಲ್ ಪ್ರೊಟೆಕ್ಷನ್ ಏಜೆನ್ಸಿ ಮತ್ತು ಅಮೆರಿಕದ […]

Advertisement

Wordpress Social Share Plugin powered by Ultimatelysocial