ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ತಗ್ಗುಪ್ರದೇಶಗಳು ಮಿನಿ ಕೆರೆಯಂತಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆಯಿಂದಾಗಿ ತರಗತಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾದಲ್ಲಿ ಅಂತಹ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಹಾಗೂ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ ಮತ್ತು ಬಿಇಒಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬುಧವಾರ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇದೆ. ಅಲ್ಲಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಅಡಕೆ, ತೆಂಗು ತೋಟಗಳಲ್ಲೂ ಐದಾರು ಅಡಿ ಎತ್ತರದಷ್ಟು ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಹೊನ್ನಾವರಂ ಕುಮುಟಾ, ಕಾರವಾಟ, ಅಂಕೋಲಾದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜುಲೈ 18ರಿಂದ ನೂತರ ಜಿಎಸ್‌ಟಿ ದರ ಜಾರಿ: ಯಾವೆಲ್ಲಾ ದುಬಾರಿ ತಿಳಿಯರಿ

Thu Jun 30 , 2022
ನವದೆಹಲಿ, ಜೂನ್ 30: ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರಿಗೆ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಮತ್ತೆ ಶಾಕ್ ನೀಡಿದೆ. ಚಂಡೀಗಢದಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಎರಡು ದಿನಗಳ 47ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹಲವು ಉತ್ಪನ್ನಗಳ ಮೇಲೆ ತೆರಿಗೆ ವಿಧಿಸಲು ನಿರ್ಣಯ ಕೈಗೊಳ್ಳಲಾಗಿದೆ. ಜುಲೈ 18ರಿಂದ ಕೆಲವು ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳು ಏರಿಕೆಯಾಗಲಿವೆ. ಎಲ್ಲಾ ರಾಜ್ಯಗಳು ಮತ್ತು ಯುಟಿಗಳ […]

Advertisement

Wordpress Social Share Plugin powered by Ultimatelysocial