ಸಜ್ಜೇ,ಜೋಳ ಮತ್ತು ಮೆಣಸಿನಕಾಯಿ ಬೆಳೆ ಸಂಪೂರ್ಣ ಹಾನಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದೆ. ಕೇರಳದಿಂದ ಮಹಾರಾಷ್ಟ್ರ ತನಕ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಅನೇಕ ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ. ಲಘು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನ ಉತ್ತರ ಕರ್ನಾಟಕದಲ್ಲಿ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಇದರಿಂದಾಗಿ ಕೈಗೆ ಬಂದ ಸಜ್ಜೇ ಮತ್ತು ಜೋಳ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ಮಳೆಗೆ ಹಾನಿಗೀಡಾಗಿದ್ದು ರೈತಾಪಿ ವರ್ಗ ಪಶ್ಚಾತಾಪ ಪಡುವಂತಾಗಿದೆ.

ಇದನ್ನೂ ಓದಿ:ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

Please follow and like us:

Leave a Reply

Your email address will not be published. Required fields are marked *

Next Post

ಪ್ರಿನ್ಸಿಪಾಲ್ ಗೆ ಕ್ಲಬ್ ಉಪಾದ್ಯಕ್ಷನಿಂದ ಲೈಂಗಿಕ ಕಿರುಕುಳ..!

Sun Feb 21 , 2021
ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳಾ ಪ್ರಾಂಶುಪಾಲರು ಯುನಿಯನ್ ಕ್ಲಬ್ ಗೆ ಹೋಗಿದ್ದ ವೇಳೆ ಮೋಹನ್ ರಾವ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಪ್ರಾಂಶುಪಾಲರು ಕ್ಲಬ್ ಗೆ ಹೋಗಿದ್ದಾಗ ಶೌಚಾಲಯಕ್ಕೆಂದು ತೆರಳುತ್ತಿದ್ದ ವೇಳೆ ಅವರನ್ನು ತಡೆದಿದ್ದ ಮೋಹನ್ ರಾವ್, ಅಸಭ್ಯವಾಗಿ ವರ್ತಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳಾ […]

Advertisement

Wordpress Social Share Plugin powered by Ultimatelysocial