13 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 235 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 235 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,28,51,929 ಕ್ಕೆ ಏರಿಕೆಯಾಗಿದೆ.

ಆ ಪೈಕಿ 5,12,344 ಮಂದಿ ಸಾವಿಗೀಡಾಗಿದ್ದಾರೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,21,58,510 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,81,075 ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಪಾಸಿಟಿವಿಟಿ ದರ ಶೇ 1.24 ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದುಬಂದಿದೆ.

ದೇಶದಲ್ಲಿ ಇದುವರೆಗೆ 1,75,83,27,441 ಕೋಟಿ ಡೋಸ್‌ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.

ಸದ್ಯ ಕೇರಳದಲ್ಲಿ 59,729, ಮಹಾರಾಷ್ಟ್ರದಲ್ಲಿ 18,516, ತಮಿಳುನಾಡಿನಲ್ಲಿ 14,033, ಕರ್ನಾಟಕದಲ್ಲಿ 11,397, ಉತ್ತರ ಪ್ರದೇಶ 6,366, ಆಂಧ್ರ ಪ್ರದೇಶದಲ್ಲಿ 5,985 ಸಕ್ರಿಯ ಪ್ರಕರಣಗಳಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹತ್ಯೆಗೀಡಾದ ಬಜರಂಗದಳ ಹರ್ಷ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ

Tue Feb 22 , 2022
ದಾವಣಗೆರೆ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ 2 ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನು ಕಳೆದುಕೊಂಡಂತೆ. ಅವರ ಕುಟುಂಬದವರಿಗೆ ನಾನು 2 ಲಕ್ಷ ರೂಪಾಯಿ ನೀಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ 28 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ನನ್ನು ಚಾಕುವಿನಿಂದ ಇರಿದು ಹತ್ಯೆ […]

Advertisement

Wordpress Social Share Plugin powered by Ultimatelysocial