hemUjjwala Sce: 75 ಲಕ್ಷ ಮನೆಗಳಿಗೆ ಉಚಿತ ಎಲ್‌ಪಿಜಿ ಕನೆಕ್ಷನ್;‌ 1,650 ಕೋಟಿ ರೂ. ನೀಡಿದ ಕೇಂದ್ರ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್‌ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಇಳಿಸುವ ಮೂಲಕ ದೇಶದ ಜನರ ಹೊರೆ ಕಡಿಮೆ ಮಾಡಿದ ಕೇಂದ್ರ ಸರ್ಕಾರ ಈಗ ಮತ್ತೊಂದು ಘೋಷಣೆ ಮಾಡಿದೆ. ದೇಶದ 75 ಲಕ್ಷ ಮನೆಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ (Ujjwala Scheme) ಉಚಿತವಾಗಿ ಅಡುಗೆ ಅನಿಲ ಸಂಪರ್ಕಕ್ಕಾಗಿ 1,650 ಕೋಟಿ ರೂ.

ಮೀಸಲಿಡಲು ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ (Union Cabinet) ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ದೇಶಾದ್ಯಂತ ಬಡವರ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರವು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಜಾರಿಗೊಳಿಸಿದೆ. ಇದೇ ಯೋಜನೆ ಅಡಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿಯನ್ನೂ ನೀಡಲಾಗುತ್ತಿದೆ. ಈಗ ಉಜ್ವಲ ಯೋಜನೆ ಅನ್ವಯ ದೇಶದ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಹೆಚ್ಚಿನ ಹಣ ವಿನಿಯೋಗಿಸಲು ತೀರ್ಮಾನಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಇಷ್ಟು ಮನೆಗಳಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸುವುದು ಕೇಂದ್ರದ ಗುರಿಯಾಗಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

Namma Metro:ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗದ ಸುರಕ್ಷತಾ ಪರಿಶೀಲನೆ ಮುಂದಕ್ಕೆ

Wed Sep 13 , 2023
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರ ನಡುವಿನ ರೈಲು ಓಡಾಟ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ. ಬುಧವಾರ ನಿಗದಿಯಾಗಿದ್ದ ಬೆಂಗಳೂರು ಮೆಟ್ರೋದ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ನಡುವಿನ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ (ಸಿಎಂಆರ್‌ಎಸ್) ಬಹುನಿರೀಕ್ಷಿತ ಪರಿಶೀಲನೆಯನ್ನು ಮುಂದೂಡಲಾಗಿದೆ. ಇದು ಈ ಭಾಗದ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ . ಮುಂದಿನ ತಪಾಸಣೆ ದಿನಾಂಕ ಯಾವಾಗ ಎಂದು ಇನ್ನೂ ನಿಗದಿಯಾಗಿಲ್ಲ ಎಂದು […]

Advertisement

Wordpress Social Share Plugin powered by Ultimatelysocial