ಮನೆಯ ಕಾಂಪೌಂಡ್ ಒಳಗೇ ವಯೋವೃದ್ಧೆಯ ಶವಸಂಸ್ಕಾರ, ಸ್ಥಳೀಯರಿಂದ ಆಕ್ರೋಶ

ಬೆಂಗಳೂರು: ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಮೃತರಾದ ವಯೋವೃದ್ಧೆಯ ಶವ ಸಂಸ್ಕಾರವನ್ನು ಮನೆಯ ಕಾಂಪೌಂಡ್ ಒಳಗೆ ಮಾಡಿದ ವಿಚಿತ್ರ ಘಟನೆ ನಗರದಲ್ಲಿ ನಡೆದಿದ್ದು ಇದಕ್ಕೆ ಸ್ಥಳೀಯರಿಂದ ತೀವ್ರ ಆಕ್ರೋಶ ಎದುರಾಗಿದೆ.ನಗರದ ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಮೃತರಾದ ವಯೋವೃದ್ಧೆಯನ್ನು ಕುಟುಂಬಸ್ಥರು ಅವರ ಮನೆಯ ಕಾಂಪೌಂಡ್ ಒಳಗೆ ಅಂತ್ಯ ಸಂಸ್ಕಾರ ಮಾಡಿದ್ದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಶವವನ್ನು ಹೊರತೆಗೆದು ಬೇರೆಡೆ ಹೂಳುವಂತೆ ಅಗ್ರಹಿಸಿದ್ದಾರೆ.ಸ್ಥಳೀಯರ ವಿರೋಧದ ನಡುವೆಯೂ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲೇಔಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಅಲ್ಲಿ ನೆರೆದವರ ಮೇಲೆ ಕಲ್ಲು ತೂರಿದ ಹೈಡ್ರಾಮ ನಡೆದಿದೆ.ಇದಕ್ಕೆ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಜನವಸತಿ ಪ್ರದೇಶದಲ್ಲಿ ಈ ರೀತಿ ಅಂತ್ಯಕ್ರಿಯೆ ನಡೆಸಿರುವುದು ಸರಿಯಲ್ಲ. ಈ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿದ್ದಾರೆ. ಈ ನಡುವೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವೃದ್ಧೆಯ ಸಂಬಂಧಿಕರು ಮತ್ತು ಸ್ಥಳೀಯರ ನಡುವೆ ಸಂಧಾನಕ್ಕೆ ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕುಕ್ಕೆ ಸುಬ್ರಹ್ಮಣ್ಯ'ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ;

Wed Feb 2 , 2022
ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯ ಸರ್ಕಾರ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಹಿಂದಕ್ಕೆಪಡೆದಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಈ ಹಿಂದಿನಂತೆ ಎಲ್ಲಾ ಸೇವೆ ಹಾಗೂ ದರ್ಶನಗಳು ಆರಂಭವಾಗಿವೆದೇಗುಲದ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ್ದು, ತಾತ್ಕಾಲಿಕವಾಗಿ ರದ್ದು ಗೊಂಡಿದ್ದ ಧಾರ್ಮಿಕ ಸೇವೆಗಳನ್ನು ಈಗ ಪುನರಾರಂಭಿಸಲಾಗಿದೆ. ಭಕ್ತಾದಿಗಳು ಈ ಮೊದಲಿನಂತೆ ಎಲ್ಲಾ ಸೇವಾ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, […]

Advertisement

Wordpress Social Share Plugin powered by Ultimatelysocial