ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಜಾಮೀನು ನೀಡಿದೆ.

 

 

ಬೆಂಗಳೂರು, ಏ.21- ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಜಾಮೀನು ನೀಡಿದೆ. ಎಂಟನೆ ತರಗತಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಪೋಷಕರ ಸಮ್ಮತಿ ಇಲ್ಲದೆ ಪ್ರೀತಿ-ಪ್ರೇಮದ ನೆಪದಲ್ಲಿ ಮನೆಯಿಂದ ಹೊರಗೆ ಕರೆದೊಯ್ದಿದ್ದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದ್ದು, ನನಗೆ ಪರೀಕ್ಷೆ ಬರೆಯಲು ಜಾಮೀನು ನೀಡಬೇಕೆಂದು ಕೋರಿ ಈ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಯು 1 ಲಕ್ಷ ರೂ. ಬಾಂಡ್ ನೀಡಬೇಕು. ಪರೀಕ್ಷೆ ಮುಗಿದ ತಕ್ಷಣ ಮೇ 11ರ ಸಂಜೆ 6 ಗಂಟೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ವಯಂ ಶರಣಾಗಬೇಕು. ಈತನಿಗೆ ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು. ಸಾಕ್ಷ್ಯನಾಶಕ್ಕೆ ಪ್ರಯತ್ನಿಸಬಾರದು ಎಂಬ ಹಲವು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.

ಅಪ್ಪ-ಅಮ್ಮ ಮನೆಯಲ್ಲಿ ಇಲ್ಲದ ವೇಳೆ ನನ್ನ ತಂಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿಗಳು ಮನೆಯಿಂದ ಕರೆದೊಯ್ದು ಸುತ್ತಾಡಿಕೊಂಡು ಬಂದಿದ್ದರು. ಈ ವೇಳೆ ಮನೆಯೊಳಗೆ ಬಂದ ಅವರನ್ನು ಹೊರಹೋಗುವಂತೆ ಸೂಚಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದರು ಎಂದು ಸಂತ್ರಸ್ತೆಯ ಅಕ್ಕ ಇದೇ ಏ.14ರಂದು ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

‘ಈಶ್ಚರಪ್ಪ ಬದಲು ಕುಮಾರಸ್ವಾಮಿಯನ್ನು ಬಂಧಿಸಬೇಕಾ’ ಎಂದು ಹೇಳಿಕೆ ನೀಡಿದ್ದ!

Thu Apr 21 , 2022
  ಮೈಸೂರು: ‘ಈಶ್ಚರಪ್ಪ ಬದಲು ಕುಮಾರಸ್ವಾಮಿಯನ್ನು ಬಂಧಿಸಬೇಕಾ’ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಮಹಾನ್ ನಾಯಕ ಸಿದ್ದರಾಮಯ್ಯ 12 ವರ್ಷದ ಹಿಂದೆ ದಾಖಲಾಗಿದ್ದ ಪ್ರಕರಣದ ಮೂಲಕ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಲು ಪ್ರಯತ್ನ ಮಾಡಿದ್ದರು. ನಾನು ಚಪಲಕ್ಕೋ ಅಥವಾ ಯಾರಿಗೋ ತೊಂದರೆ ಕೊಡಲು ಮಾತನಾಡುವುದಿಲ್ಲ’ ಎಂದು ‘ಸುಳ್ಳಿನ ರಾಮಯ್ಯ’ ಹೇಳಿಕೆ ಪುನರುಚ್ಚರಿಸಿದರು. ‘ನಾನು ಕೆ. […]

Advertisement

Wordpress Social Share Plugin powered by Ultimatelysocial