2011ನೇ ನೇಮಕಾತಿ ಕುರಿತು ಸಲ್ಲಿಕೆಯಾಗಿದ್ದ ಪಿಐಎಲ್‌ ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

 

 

ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2011ನೇ ನೇಮಕಾತಿ ಕುರಿತು ಸಲ್ಲಿಕೆಯಾಗಿದ್ದ ಪಿಐಎಲ್‌ ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆ ಬಗ್ಗೆ ಕೋರ್ಟ್‌ ಮೊರೆ ಹೋಗಲಾಗಿತ್ತು.

ಸಾಮಾಜಿಕ ಕಾರ್ಯಕರ್ತ ಆರೀಫ್ ಜಮಾಲ್ 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್ ಅರ್ಜಿಯ ವಿಚಾರಣೆ ವೇಳೆ ಈಗಾಗಲೇ 2011ನೇ ಸಾಲಿನ ನೇಮಕಾತಿಯನ್ನು ಹೈಕೋರ್ಟ್‌ ಈ ಹಿಂದೆ ರದ್ದುಪಡಿಸಿದೆ ಎಂಬ ಹಿನ್ನಲೆಯಲ್ಲಿ ಇಡೀ ಕಾಯ್ದೆಯನ್ನು ಅಸಾಂವಿಧಾನಿಕ ಎನ್ನಲಾಗದು. ಕಾಯ್ದೆಯಲ್ಲಿ ಯಾವ ನಿಯಮಗಳು ಅಸಾಂವಿಧಾನಿಕ ಎಂಬುದನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ವಿಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ವಿವಾದವೇನು? 2011ರಲ್ಲಿ ಕೆಪಿಎಸ್‌ಸಿ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿ ಸಂಭಾವ್ಯ ಪಟ್ಟಿ ಪ್ರಕಟಿಸಿದಾಗ ಡಾ. ಎಚ್. ಪಿ. ಎಸ್. ಮೈತ್ರಿಯಾ ನೇಮಕದಲ್ಲಿ ಅವ್ಯವಹಾರ ಆರೋಪ ಮಾಡಿದ್ದರು. ಬಳಿಕ ಈ ಪ್ರಕರಣ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ತನಕ ಹೋಗಿತ್ತು.

2014ರಲ್ಲಿ ಸರ್ಕಾರ ಈ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಆಗಸ್ಟ್ 8ರಂದು ಸರ್ಕಾರ ಆಯ್ಕೆಪಟ್ಟಿಯನ್ನು ವಾಪಸ್ ಪಡೆದಿತ್ತು. 2016ರಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಸರ್ಕಾರದ ಆದೇಶ ರದ್ದು ಮಾಡಿ ಪಟ್ಟಿ ಊರ್ಜಿತಗೊಳಿಸಿತ್ತು. ಇದನ್ನು ಸುಪ್ರೀಂಕೋರ್ಟ್‌ ಸಹ ಮಾನ್ಯ ಮಾಡಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದೆ!

Thu Apr 21 , 2022
  ನವದೆಹಲಿ: ಭಯೋತ್ಪಾದನೆಯು ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸಲು ಈ ಬೆದರಿಕೆಯನ್ನು ಬೇರುಸಹಿತ ಕಿತ್ತುಹಾಕುವ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) 13ನೇ ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ಮಾತನಾಡಿದ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ನಿಧಿ ವಿರುದ್ಧ ದಾಖಲಾದ ಪ್ರಕರಣಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಹಾಯ […]

Advertisement

Wordpress Social Share Plugin powered by Ultimatelysocial