ಹೈಕೋರ್ಟ್ ಬೀಸಿದ ಚಾಟಿಗೆ ಏಟಿಗೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ,

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ತಕ್ಷಣ ಆರಂಭಿಸಲು ಕಾರ್ಯಾದೇಶವನ್ನು ನೀಡಿದೆ.

ಪೈಥಾನ್ ಯಂತ್ರದ ಮೂಲಕ ಗುಂಡಿ ಮುಚ್ಚುವ ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್ (ಎಆರ್‌ಟಿಎಸ್) ಸಂಸ್ಥೆಗೆ ಏ.20ರಂದು ತಾತ್ಕಾಲಿಕ ಕಾರ್ಯಾದೇಶ ನೀಡಲಾಗಿದೆ ಎಂದು ಬಿಬಿಎಂಪಿ ನೀಡಿದೆ.

ಹಾಗಾಗಿ ನ್ಯಾಯಾಲಯ ತಕ್ಷಣವೇ ಗುಂಡಿ ಮುಚ್ಚುವ ಕಾರ್ಯ ಆರಂಭಸುವಂತೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕೋರಮಂಗಲದ ವಿಜಯ್ ಮೆನನ್ 2015ರಲ್ಲಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕಾರ್ಯಾದೇಶ ನೀಡಿರುವ ಬಗ್ಗೆ ಬಿಬಿಎಂಪಿ ವಕೀಲರು ನೀಡಿದ ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ, ಪಾಲಿಕೆ ಹೊರಡಿಸಿರುವ ಕಾರ್ಯಾದೇಶದ ಪ್ರಕಾರ ಎಆರ್‌ಟಿಎಸ್ ಸಂಸ್ಥೆಯು ತಕ್ಷಣವೇ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಆರಂಭಿಸಬೇಕು ಎಂದು ನಿರ್ದೇಶಿಸಿತು.

ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ 1449 ರೂ
ಅಲ್ಲದೆ, ಲೋಕೋಪಯೋಗಿ ಇಲಾಖೆಯು ರಸ್ತೆ ಗುಂಡಿ ಮುಚ್ಚುವ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ 1449 ರೂ. ನೀಡಲಾಗುವುದು ಎಂದು ಷೆಡ್ಯೂಲ್ ದರ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಅದನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಗುಂಡಿ ಮುಚ್ಚುವ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಬೇಕು ಎಂಬುದನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಪುನರ್ ಪರಿಗಣಿಸಬೇಕು ಎಂದು ಸೂಚಿಸಿತು. ಹಾಗೆಯೇ, ದರ ನಿಗದಿ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಕೈಗೊಂಡ ನಿರ್ಧಾರ ಹಾಗೂ ರಸ್ತೆ ಗುಂಡಿ ಮುಚ್ಚಿರುವುದಕ್ಕೆ ಸಂಬಂಧಿಸಿದ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಕೆಲಸ ಆರಂಭಿಸಲು ಕಂಪೆನಿಯು ಮುಂಗಡ ಹಣಕ್ಕೆ ಬೇಡಿಕೆ ಸಲ್ಲಿಸಿದರೆ, ಅದನ್ನು ಬಿಬಿಎಂಪಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 31ಕ್ಕೆ ಮಂದೂಡಿತು.

36 ಗಂಟೆ ಗಡುವು

36 ಗಂಟೆ ಗಡುವು: ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿ ವಿಳಂಬ ನೀತಿಗೆ ಹೈಕೋರ್ಟ್ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, 36 ಗಂಟೆಯೊಳಗೆ ಅಮೆರಿಕನ್ ರಸ್ತೆ ತಂತ್ರಜ್ಞಾನ ಸಂಸ್ಥೆಯೊಂದಿಗೆ ರಸ್ತೆ ಗುಂಡಿ ಮುಚ್ಚಲು ಒಪ್ಪಂದ ಹಾಗೂ ಕಾರ್ಯಾದೇಶ ಹಾಜರುಪಡಿಸಬೇಕು ಎಂದು ಆದೇಶಿಸಿದೆ.

ನ್ಯಾಯಪೀಠ, ಪದೇ ಪದೇ ಒಂದಿಲ್ಲೊಂದು ನೆಪ ಹೇಳುತ್ತಿರುವ ಬಿಬಿಎಂಪಿ, ಒಮ್ಮೆ ರಸ್ತೆ ಗುಂಡಿ ಅಗೆಯುವ ಸಂಸ್ಥೆ ಹೊಣೆ ಎನ್ನುತ್ತೀರಾ. ಮತ್ತೊಮ್ಮೆ ಮಳೆ, ಟೆಂಡರ್ ಇತ್ಯಾದಿ ಒಂದಲ್ಲಾ ಒಂದು ನೆಪ ಹೇಳುತ್ತೀರಾ? ರಸ್ತೆ ಗುಂಡಿ ಸರಿಪಡಿಸಲೂ ನಿಮ್ಮಿಂದಾಗುವುದಿಲ್ಲವೇ? ಎಲ್ಲದಕ್ಕೂ ಒಂದು ಮಿತಿ ಇದೆ, ವಿಳಂಬ ಸಹಿಸಲಾಗದು” ಎಂದು ಖಡಕ್ ಆಗಿ ಹೇಳಿತು.

ವಲಯವಾರು ಕ್ರಿಯಾ ಯೋಜನೆ

ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಲಯವಾರು ಕ್ರಿಯಾ ಯೋಜನೆ ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬಿಬಿಎಂಪಿಗೆ ಆದೇಶಿಸಿತ್ತು. ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ; ನ್ಯಾಯಪೀಠ ”ರಸ್ತೆ ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ,ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಬಿಬಿಎಂಪಿ ಏಕೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಿಲ್ಲ. ಉದ್ದೇಶಪೂರ್ವಕವಾಗಿ ಬಿಬಿಎಂಪಿ ಇಂಜಿನಿಯರ್ ಗಳು ಹೀಗೆ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ‌. ಹಾಗಾಗಿ ಬಿಬಿಎಂಪಿ ಇಂಜಿನಿಯರ್ ಗಳನ್ನೇ ಬದಲಿಸಲು ಸರ್ಕಾರಕ್ಕೆ ಆದೇಶ ನೀಡುತ್ತವೆ” ಎಂದು ಎಚ್ಚರಿಕೆ ನೀಡಿತ್ತು. ಆಗ ನ್ಯಾಯಪೀಠ, ರಸ್ತೆ ಗುಂಡಿ ಮುಚ್ಚಲು ಉತ್ತಮ ತಂತ್ರಜ್ಞಾನ ಬಳಸಿ, ಬರೀ ಕಣ್ಣೊರೆಸುವ ತಂತ್ರ ಇಲ್ಲಿ‌ ನಡೆಯುವುದಿಲ್ಲ ಎಂದಿದ್ದ ನ್ಯಾಯಪೀಠ,ಸುದೀರ್ಘ ಬಾಳಿಕೆಯ ರಸ್ತೆಗಳನ್ನು ನಿರ್ಮಿಸದಿದ್ದರೆ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ ನೀಡಿತು.

ಇಂಜಿನಿಯರ್‌ಗೆ ಕ್ಲಾಸ್:

ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಇಂಜಿನಿಯರ್‌ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕ್ಲಾಸ್ ತೆಗೆದುಕೊಂಡಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸೋದಕ್ಕೆ ರಾಜ್ಯ ಸರ್ಕಾರ ಅನುಮತಿ!

Fri Apr 22 , 2022
ಬೆಂಗಳೂರು: ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು 50 ರಿಂದ 100ಕ್ಕೆ ಹೆಚ್ಚಿಸೋದು ಹಾಗೂ 19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸೋದಕ್ಕೆ ರಾಜ್ಯ ಸರ್ಕಾರ ಅನುಮತಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಾರ್ಮಿಕ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, 2022-23ನೇ ಸಾಲಿನ ಆಯವ್ಯಯ ಭಾಷಣದಂತೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ […]

Advertisement

Wordpress Social Share Plugin powered by Ultimatelysocial