ಹತ್ತು ವರ್ಷದ ನಂತರ ಒಂದಾದ ದಂಪತಿ ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ

ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ…ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು. ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ‌ ಅರ್ಜಿ ಸಲ್ಲಿಸಿದ್ದರು. ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು.ಉಭಯ ಪಕ್ಷಗಾರರ ಸಂಬಂಧಿಕರು ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್ . ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ಮುಂದಿನ ದಾಂಪತ್ಯ ಜೀವನ ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಇಟ್ಟುಕೊಂಡು ರಾಜಿ ಮಾಡಿಕೊಂಡರು. ಒಂದಾದ ದಂಪತಿಗಳನ್ನು ನ್ಯಾಯಧೀಶರಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪಿ . ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು…ನ್ಯಾಯಾಧೀಶರುಗಳು ದಂಪತಿಗಳು ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು. ದಂಪತಿಗಳು ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ….

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಈ ಬಿಯರ್ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ರಸ್ತೆಯಲ್ಲಿ ಬೃಹತ್ ಸ್ಪಿಲ್ ಅನ್ನು ಸ್ವಚ್ಛಗೊಳಿಸಲು ಸಹಾಯ ಮಾಡಿದ 'ಹೀರೋಗಳನ್ನು' ಹುಡುಕುತ್ತಿದೆ

Wed Jul 20 , 2022
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿದ ನಂತರ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇಪ್ಪತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೂಚ್ ಹಾಕಿದ ನಂತರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಹಲವರು ಚಿಂತಾಜನಕರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಸ್ಥಳೀಯ ಮೂಲಗಳ ಪ್ರಕಾರ, ಮಂಗಳವಾರ ರಾತ್ರಿ ಮದ್ಯ ಸೇವಿಸಿದ ನಂತರ ಆ ಪ್ರದೇಶದಲ್ಲಿ ಹಲವಾರು ಜನರು ಅಸ್ವಸ್ಥರಾಗಿದ್ದರು. ಅನೇಕ ಜನರು […]

Advertisement

Wordpress Social Share Plugin powered by Ultimatelysocial