ಹಿಜಾಬ್‌ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಲಾಗಿದೆ.

ಬೆಂಗಳೂರು, ಫೆಬ್ರವರಿ 10: ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.ಈ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಲಾಗಿದೆ.ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.ಹೈಕೋರ್ಟ್ ಕಲಾಪ ಆರಂಭಹಿಜಾಬ್ ಅರ್ಜಿ ವಿಚಾರಣೆ ಹೈಕೋರ್ಟ್ ಕಲಾಪ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಪೀಠದಲ್ಲಿ ಹಾಜರಾಗಿದ್ದಾರೆ.ಇದೇ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಲು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಕೋರ್ಟ್ ಹಾಲ್‌ನಲ್ಲಿ ಹಾಜರಾಗಿದ್ದಾರೆ. ಕೇಸ್ ಗಮನಿಸಲು ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.ಹಿಜಾಬ್ ಧರಿಸುವುದು ಮುಸ್ಲಿಂ ಮಹಿಳೆಯರ ಹಕ್ಕು ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ಪ್ರಕರಣದ ಹಿನ್ನೆಲೆ ತಿಳಿಸಿ ವಾದ ಮಂಡಿಸಿದರು.ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಗದರುತ್ತಿದ್ದರು. ಹಿಜಾಬ್ ತೆಗೆದು ಬರುವಂತೆ ಸೂಚನೆ ಕೊಡುತ್ತಿದ್ದರು ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ವಾದಿಸಿದರು.ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ನಿಯಮವಿಲ್ಲವೆಂದು ವಕೀಲ ಸಂಜಯ್ ಹೆಗ್ಡೆ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಸಮವಸ್ತ್ರ ಧರಿಸುವ ಅವಕಾಶವಿಲ್ಲವೇ ಎಂದು ಪ್ರಶ್ನಿಸಿದರು.ಐದು ವರ್ಷಗಳಿಗೊಮ್ಮೆ ಸಮವಸ್ತ್ರ ಬದಲಾಗಬೇಕು. ಪಿಯುಸಿ ಕಾಲೇಜುಗಳಿಗೆ ಸಂಬಂಧಿಸಿದಂತೆ ಸಮವಸ್ತ್ರ ನಿಯಮವಿಲ್ಲ ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ವಾದ ಮಂಡನೆ.ಸೆಕ್ಷನ್ 113 ನಿಯಮಾವಳಿ ಓದುತ್ತಿರುವ ವಕೀಲರು, ಕೆಲ ಕಡೆ ಸಮವಸ್ತ್ರ ಉಲ್ಲಂಘನೆಯಾದರೆ 2 ರೂ. ದಂಡವಿದೆ ಎಂದರು.ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಮಾತನಾಡುತ್ತಾ, ವಕೀಲ ಸಂಜಯ್ ಹೆಗ್ಡೆ ಅರ್ಜಿಯಲ್ಲಿ ಸರ್ಕಾರಿ ಆದೇಶವನ್ನು ಪ್ರಶ್ನಿಸಿಲ್ಲ. ಹಾಗಾಗಿ ನಮಗೆ ಅವಕಾಶ ನೀಡಿ ಎಂದು ದೇವದತ್ ಕಾಮತ್ ನ್ಯಾಯಮೂರ್ತಿಗಳಲ್ಲಿ ವಿನಂತಿಸಿದರು.ಶಾಲಾ ಅಭಿವೃದ್ಧಿ ಮಂಡಳಿ ಪರ ಸಜನ್ ಪೂವಯ್ಯ ವಾದ ಮಂಡನೆ ಮಾಡುತ್ತಿದ್ದು, ಸಂಜಯ್ ಹೆಗ್ಡೆ ಒದಗಿಸಿರುವ ದಾಖಲೆಗಳನ್ನು ನಮಗೂ ಒದಗಿಸಬೇಕು ಎಂದು ಕೇಳಿದ್ದಾರೆ.ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮಾತನಾಡಿ, ಮದ್ಯಂತರ ತೀರ್ಪಿಗೆ ವಾದಿಸುತ್ತಿರೋ? ಅಥವಾ ಅಂತಿಮ ತೀರ್ಪಿಗಾಗಿ ವಾದಿಸುತ್ತಿರೋ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದರು.ನಾವು ಶಾಲಾ- ಕಾಲೇಜು ಆರಂಭಿಸಲು ಸಿದ್ಧರಿದ್ದೇವೆ. ಆದರೆ ಒಬ್ಬರು ಹಿಜಾಬ್ ಧರಿಸಿ ಬರುತ್ತಿದ್ದಾರೆ, ಮತ್ತೊಬ್ಬರು ಕೇಸರಿ ಶಾಲು ಧರಸಿ ಬರುತ್ತಿದ್ದಾರೆ. ಇದರಿಂದ ಕಾಲೇಜುಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು ಸರ್ಕಾರದ ಪರ ವಕೀಲ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿದರುಹಿಜಾಬ್ ಮತ್ತು ಸಮವಸ್ತ್ರ ಧರಿಸಲು ಅವಕಾಶ ನೀಡಬೇಕೆಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದರು.ಹಿಜಾಬ್ ಧರಿಸುವುದು ಅತ್ಯಗತ್ಯ ಭಾಗವೇ? ಸಂವಿಧಾನದ 25ರಡಿ ಮೂಲಭೂತ ಹಕ್ಕೇ? ಎಂದು ಹೈಕೋರ್ಟ್ ಸಿಜೆ ಪ್ರಶ್ನಿಸಿದರು.ಧರ್ಮ, ವಸ್ತ್ರ ಏನೇ ಇದ್ದರೂ ಎಲ್ಲ ನಮ್ಮ ವಿದ್ಯಾರ್ಥಿಗಳು. ಹಿಜಾಬ್‌ಗೆ ಯಾರೂ ತಡೆ ನೀಡಬಾರದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂದಿನ ಎರಡು ದಿನಗಳಲ್ಲಿ ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಸಾಧ್ಯತೆ

Thu Feb 10 , 2022
ಮುಂದಿನ ಎರಡು ದಿನಗಳಲ್ಲಿ ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ತನ್ನ ಇತ್ತೀಚಿನ ಮುನ್ಸೂಚನೆಯಲ್ಲಿ ತಿಳಿಸಿದೆ.ಇದಲ್ಲದೆ, ಫೆಬ್ರವರಿ 10 ರಂದು ಜಾರ್ಖಂಡ್, ಬಿಹಾರ, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.’ಒಂದು ಪಾಶ್ಚಿಮಾತ್ಯ ಅಡಚಣೆಯು ಮಧ್ಯ ಮತ್ತು ಮೇಲ್ಭಾಗದ ಟ್ರೋಪೋಸ್ಫಿರಿಕ್ ವೆಸ್ಟರ್ಲಿಗಳಲ್ಲಿ ಲಾಂಗ್ ಜತೆಗೆ ಸಾಗುತ್ತದೆ. ಲ್ಯಾಟ್‌ನ ಉತ್ತರಕ್ಕೆ 82°E. […]

Advertisement

Wordpress Social Share Plugin powered by Ultimatelysocial