ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಇಂದು 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸ್ ಹೈಕೋರ್ಟ್ ಅಂಗಳಕ್ಕೆ ತಲುಪಿತ್ತು
ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್ ನೋಟಿಸ್ ನೀಡಿದೆ. ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ರಾಜ್ಯ ಹೈಕೋರ್ಟ್ ನೋಟಿಸ್ ನೀಡಿದೆ.ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಕೊರೋನಾ ಕೇಸ್ ಹೆಚ್ಚುತ್ತಿರೋ ಸಮಯದಲ್ಲಿ ಪಾದಯಾತ್ರೆ ಬೇಕಿತ್ತಾ ಎಂದು PILನಲ್ಲಿ ಪ್ರಶ್ನಿಸಿದ್ದರು. ಇದೀಗ ಹೈಕೋರ್ಟ್, ಪಾದಯಾತ್ರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ, ಜನವರಿ 14ರಂದು ನಮಗೆ ಉತ್ತರ ಕೊಡಿ ಎಂದು ಸೂಚನೆ ನೀಡಿದೆ .
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada