ಹೈಕೋರ್ಟ್‌ನಿಂದ ಐತಿಹಾಸಿಕ ತೀರ್ಪು: ಯಶ್‌ಪಾಲ್ ಸುವರ್ಣ

ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಕಾನೂನುಬದ್ಧ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.ಹಿಜಾಬ್ ಪ್ರಕರಣದಲ್ಲಿ ಸಮವಸ್ತ್ರದ ಪರವಾಗಿ ನ್ಯಾಯಾಲಯ ತೀರ್ಪು ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳ ಸುವ್ಯವಸ್ಥಿತ ಶಿಕ್ಷಣಕ್ಕಾಗಿ ನಡೆಸಿದ ಕಾನೂನುಬದ್ಧ ಹೋರಾಟಕ್ಕೆ ಸಿಕ್ಕಿರುವ ಜಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ ಮತಾಂಧ ಶಕ್ತಿಗಳ ವಿರುದ್ಧ ಹೋರಾಟ ನಿರಂತರವಾಗಿರಲಿದೆ ಎಂದು ತಿಳಿಸಿದ್ದಾರೆ.ಆರು ವಿದ್ಯಾರ್ಥಿನಿಯರು ಮತಾಂಧ, ದೇಶದ್ರೋಹಿ ಸಂಘಟನೆಗಳ ಕುಮ್ಮಕ್ಕಿನಿಂದ ಉಡುಪಿಯಲ್ಲಿ ಆರಂಭಿಸಿದ ಹಿಜಾಬ್ ವಿವಾದ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿತ್ತು. ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಲು ಹೊರಟವರಿಗೆ ಹೈಕೋರ್ಟ್ ತಕ್ಕ ಉತ್ತರ ನೀಡಿದೆ.ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ನಡೆಸಿದ್ದ ಎಸ್‌ಡಿಪಿಐ, ಸಿಎಫ್‌ಐ ಸಂಘಟನೆಗಳ ವಿರುದ್ಧ ಕಾನೂನು ಹೋರಾಟದ ಮೂಲಕ ಮೊದಲ ಜಯ ಸಾಧಿಸಲಾಗಿದೆ. ರಾಷ್ಟ್ರ ವಿರೋಧಿ ಸಂಘಟನೆಗಳ ವಿರುದ್ಧ ಮುಂದೆಯೂ ಹೋರಾಟ ನಡೆಸಲಿದ್ದೇವೆ. ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವ ವಿಶ್ವಾಸವಿದೆ.ಹಿಜಾಬ್ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜು ಹಾಕಲು ಯತ್ನಿಸಿದ ಮತಾಂಧ ಶಕ್ತಿಗಳ ಮುಖವಾಡ ಕಳಚಿದ್ದು, ಇಂತಹ ಸಮಾಜಘಾತುಕ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಹಿಂದೂ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಪೂರಕವಾಗಲಿದೆ ಎಂದು ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Калькулятор лота для МТ4

Tue Mar 15 , 2022
Данный инструмент, как уже говорилось выше, очень удобен, так как дает возможность рассчитывать многие необходимые параметры по торгуемым активам. А как правильно работать в онлайне с кредитным калькулятором мы сегодня вам и расскажем. Если 0, то расчет по текущему балансу или можно указать свои данные. Если выбрать FixedLotто расчет будет […]

Advertisement

Wordpress Social Share Plugin powered by Ultimatelysocial