ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತಿದ್ದೀರಾ!

ಮೈಸೂರು: ಎಲ್ಲ ರೀತಿಯ ಒತ್ತಡ, ಟೀಕಾಪ್ರಹಾರದ ನಡುವೆಯೂ ಶಾಲಾ-ಕಾಲೇಜುಗಳಳಲ್ಲಿ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್​ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಶಾಲಾ-ಕಾಲೇಜು ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ.ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತಿದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಾಗೆ ಹೋಗಿ ಎಂದು ಸಂಸದ ಪ್ರತಾಪ್​ ಸಿಂಹ ಸೂಚಿಸಿದ್ದಾರೆ.ಶನಿವಾರ ಸುದ್ದಿಗಾರರ ಜತೆ ಮಾತನಾಡಿದ, ಇದು ಬ್ರಿಟಿಷರ ಭಾರತವಲ್ಲ. ಇದು ಭರತಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶ ಇದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಾಗೆ ಹೋಗಿ. ಮದರಸಾದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ, ಸರ್ಕಾರಿ ಶಾಲೆಗಳಲ್ಲಿ ಈ ರೀತಿಯ ಪ್ರತ್ಯೇಕತೆ ಸಾಧ್ಯವಿಲ್ಲ ಎಂದರು.ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಏರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಪ್ರತಾಪ್ ಸಿಂಹ ಹೇಳಿದರು.ಸಿದ್ದರಾಮಯ್ಯ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ‘ಸಿದ್ದರಹೀಮ್ ಅಯ್ಯಾ’ ಅಂತಾ ಬೇಕಾದರೆ ಹೆಸರು ಬದಲಾಯಿಸಿಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾನು ಹಿಜಾಬ್ ಧರಿಸಿ ವಿಧಾನಸಭೆಗೆ ಬರಬಹುದಾದರೆ, ಅವರು ಕಾಲೇಜಿಗೇಕೆ ಹೋಗಬಾರದು?: ಶಾಸಕಿ ಕನೀಝ್ ಫಾತಿಮಾ

Sat Feb 5 , 2022
  ಬೆಂಗಳೂರು: ಹಿಜಾಬ್ ಧರಿಸಿ ನನಗೆ ವಿಧಾನಸಭೆ ಪ್ರವೇಶಿಸಲು ಸಾಧ್ಯವಾದರೆ, ಈ ಹುಡುಗಿಯರಿಗೆ ಶಾಲೆ ಅಥವಾ ಕಾಲೇಜಿನಲ್ಲಿ ಏಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರ ಕನೀಝ್ ಫಾತಿಮಾ ಪ್ರಶ್ನಿಸಿದ್ದಾರೆ.ಉಡುಪಿ ಕುಂದಾಪುರ ಸೇರಿದಂತೆ ಕೆಲ ಸರಕಾರಿ ವಿದ್ಯಾಸಂಸ್ಥೆಗಳಲ್ಲಿ ಸಂಘಪರಿವಾರ ಪ್ರೇರಿತ ʼಹಿಜಾಬ್‌- ಕೇಸರಿ ಶಾಲುʼ ಪ್ರಕರಣಕ್ಕೆ ಸಂಬಂಧಿಸಿ ಅವರು ಟ್ವೀಟ್‌ ಮಾಡಿದ್ದಾರೆ. ಹಿಜಾಬ್‌ ಧರಿಸಿದ್ದಕ್ಕೆ ವಿದ್ಯಾರ್ಥಿನಿಯರನ್ನು ಗೇಟ್‌ ಹೊರಗಡೆ ನಿಲ್ಲಿಸಿದ ವೀಡಿಯೋವನ್ನೂ ಅವರು ಟ್ವೀಟ್‌ ಮಾಡಿದ್ದಾರೆ.ಶುಕ್ರವಾರ ತಮ್ಮ […]

Advertisement

Wordpress Social Share Plugin powered by Ultimatelysocial