ಹಿಜಾಬ್​ ವಿವಾದ: ಉಡುಪಿ ಎಂಜಿಎಂ ಕಾಲೇಜಿನಲ್ಲಿ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಮುಂದೂಡಲಾಗಿದೆ

 

ಉಡುಪಿ: ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.

ಫೆ.8ರಂದು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು.

ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್‌ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.

ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್

ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮನಿ ಲಾಂಡರಿಂಗ್ ಪ್ರಕರಣ : ಯೆಸ್ ಬ್ಯಾಂಕ್ ಸಂಸ್ಥಾಪಕರು ರಾಣಾ ಕಪೂರ್‌ಗೆ ಜಾಮೀನು ನೀಡಲಾಗಿದೆ

Thu Feb 17 , 2022
ಮುಂಬೈ, ಫೆಬ್ರವರಿ 17: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಮತ್ತು ಅವನಾಥ ಗ್ರೂಪ್‌ನ ಗೌತಮ್ ಥಾಪರ್ ಮತ್ತು ಅವಂತ ಗ್ರೂಪ್‌ನ ಬಿ.ಹರಿಹರನ್ ಅವರಿಗೆ ಮುಂಬೈ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು ರಾಣಾ ಕಪೂರ್ ಹಾಗೂ ಇತರರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಥಾಪರ್ ಪರ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಮತ್ತು ಹರಿಹರನ್ ಪರ […]

Advertisement

Wordpress Social Share Plugin powered by Ultimatelysocial