ಉಡುಪಿ: ರಾಜ್ಯದಲ್ಲಿ ಹಿಜಾಬ್ ಗಲಾಟೆ ಗುರುವಾರವೂ ಮುಂದುವರಿದಿದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.ಫೆ.8ರಂದು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು.ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada