ಉಪ್ಪಿನಂಗಡಿ ಕಾಲೇಜಿನಲ್ಲಿ ಮತ್ತೆ ಹಿಜಾಬ್‌ ಸಂಘರ್ಷ :

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಘಟನೆ ನಡೆದಿದ್ದು, ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭಾ ಚುನಾವಣೆಯ ಎರಡನೇ ಅಭ್ಯರ್ಥಿಯನ್ನು ವಾಪಾಸ್ ಪಡೆಯುವ ಬಗ್ಗೆ ಈಗ ಕಾಂಗ್ರೆಸ್ ನಲ್ಲೇ ಒತ್ತಾಯ

Thu Jun 2 , 2022
  ಆರಂಭವಾಗಿದೆ. ಇದೊಂದು ಗಾಳಿಯಲ್ಲಿ ಗುದ್ದಾಡುವ ವ್ಯರ್ಥ ಪ್ರಯತ್ನ ಎಂಬ ಚರ್ಚೆ ಪ್ರಾರಂಭವಾಗಿದೆ. ಸಿದ್ದರಾಮಯ್ಯ ಒತ್ತಾಸೆ ಮೇರೆಗೆ ಮನ್ಸೂರ್ ಅಲಿ ಖಾನ್ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿದೆ. ಆದರೆ ಎರಡನೇ ಪ್ರಾಶಸ್ತ್ಯದ ಮತಗಳ ಮೂಲಕವೂ ಗೆಲ್ಲುವ ಸಂಖ್ಯೆ ಲಭಿಸುವುದಿಲ್ಲ.‌ ಹೀಗಾಗಿ ತಮಗೆ ಬೆಂಬಲಿಸಿ ಎಂದು ಜೆಡಿಎಸ್ ನಾಯಕರು ಖುದ್ದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಆದರೆ ಮಾತುಕತೆಯ ಬದಲು “ನಿಮ್ಮ ಅಭ್ಯರ್ಥಿಯನ್ನೇ ವಾಪಾಸ್ ಪಡೆಯಿರಿ” ಎಂದು […]

Advertisement

Wordpress Social Share Plugin powered by Ultimatelysocial