ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಭಾರೀ ಸದ್ದು!

ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡುತ್ತಿದ್ದು, ಶಿವಮೊಗ್ಗದಲ್ಲಿ ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದೆ.ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದಾರೆ.ಸದ್ಯ ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.ಇನ್ನು ಬಾಗಲಕೋಟೆಯಲ್ಲಿ ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಾಗಲಕೋಟೆಯ ರಬಕವಿ ಬನಹಟ್ಟಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ. ಪಿಯು ಕಾಲೇಜಿನ ಒಳಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಧರಣಿ ನಡೆಸುತ್ತಿದ್ದರೆ. ಹೊರಗೆ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಧರಣಿ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂತಾರಾಜ್ಯ ಜಲ ವಿವಾದ ಕುರಿತು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಮಾಲೋಚನೆ!

Tue Feb 8 , 2022
ನವದೆಹಲಿ: ಅಂತಾರಾಜ್ಯ ಜಲ ವಿವಾದ ಕುರಿತು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ‌ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದು, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಹಿರಿಯ ಕಾಣುತ್ತಿದ್ದರು ಸಭೆಯಲ್ಲಿ ಉಪಸ್ಥಿತರಿದ್ದರು.ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ […]

Advertisement

Wordpress Social Share Plugin powered by Ultimatelysocial