ಹಿಜಾಬ್-ಕೇಸರಿ ಶಾಲು ವಿವಾದ: ಇಂಡಿ ಪಟ್ಟಣದ ಕಾಲೇಜಿಗೆ ರಜೆ ಘೋಷಣೆ

ವಿಜಯಪುರ: ಜಿಲ್ಲೆಯಲ್ಲೂ ಹಿಜಾಬ್- ಕೇಸರಿ ಶಾಲು ಧರಿಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೋಮವಾರ ಕಾಲೇಜುಗಳಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜು ಆಡಳಿತ ಮಂಡಳಿ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿಯೇ ಕಾಲೇಜಿಗೆ ಆಗಮಿಸುವಂತೆ ತಾಕೀತು ಮಾಡಿ, ಇಂದು ಕಾಲೇಜುಗಳಿಗೆ ರಜೆ ಘೋಷಿಸಿವೆ.ವಿಜಯಪುರ ‌ಜಿಲ್ಲೆ ಇಂಡಿ ಪಟ್ಟಣದ ಎರಡು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದ ಬೆನ್ನಲ್ಲೇ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಿದ್ದಾರೆ.ಇಂಡಿ ಪಟ್ಟಣದ ಶಾಂತೇಶ್ವರ ‌ಪಿಯುಸಿ ಕಾಲೇಜು‌ ಹಾಗೂ ಜಿ.ಆರ್.ಬಿ ಪದವಿ ಕಾಲೇಜಿನ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕೇಸರಿ ಶಾಲು – ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಇದರಿಂದ ಕಾಲೇಜು ಆವರಣದಲ್ಲಿ ವಿವಾದ ತಲೆದೋರಿದೆ. ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಸಭೆ ನಡೆಸಿದ ಎರಡೂ ಕಾಲೇಜುಗಳ ಆಡಳಿತ ಮಂಡಳಿ, ಸೋಮವಾರ ಒಂದು ದಿನದ ಮಟ್ಟಿಗೆ ಕಾಲೇಜುಗಳಿಗೆ ರಜೆ ಘೋಷಿಸಿವೆ.ಮಂಗಳವಾರದಿಂದ ಕಾಲೇಜುಗಳಿಗೆ ಸರ್ಕಾರ ಜಾರಿ ಮಾಡಿರುವ ನಿಯಮದಂತೆ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಕಾಲೇಜಿಗೆ ಬರುವಂತೆ ತಾಕೀತು ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು ಆದರೆ ಉಳಿಸಲಾಗಲಿಲ್ಲ'

Mon Feb 7 , 2022
ಭಾನುವಾರ ಬೆಳಗ್ಗೆ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ ಲತಾ ಮಂಗೇಶ್ಕರ್ ಬಗ್ಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಸಿಇಒ ಡಾ ಪಿ ಸಂತಾನಂ ಅವರು ನಮ್ಮ ಮಟ್ಟದಲ್ಲಿ ಪ್ರಯತ್ನಿಸಿದ್ದೇವೆ ಆದರೆ ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. -19 ಮತ್ತು ಜನವರಿ 9 ರ ಮುಂಜಾನೆ ಆಸ್ಪತ್ರೆಗೆ ದಾಖಲಾದರು, ಸೆಪ್ಸಿಸ್‌ನಿಂದಾಗಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ದಂತಕಥೆ ಗಾಯಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 28 ದಿನಗಳನ್ನು ಕಳೆದರು ಮತ್ತು […]

Advertisement

Wordpress Social Share Plugin powered by Ultimatelysocial