ಹಿಜಾಬ್ ನಿರ್ಬಂಧ ಪ್ರಶ್ನಿಸಿದ ಎಲ್ಲ ಅರ್ಜಿಗಳ ವಜಾ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು“ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶನೀಡಬೇಕು” ಎಂಬ ಸಾರ್ವಜನಿಕ ಹಿತಾಸಕ್ತಿ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.ಹಿಜಾಬ್ ಗೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಪೀಠ ವಜಾ ಮಾಡಿದೆ.ಈ ಕುರಿತಂತೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಮಂಗಳವಾರ ಬೆಳಿಗ್ಗೆ 10.35ಕ್ಕೆ ಪ್ರಕಟಿಸಿತು.”ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನ್ ನಲ್ಲಿ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಸಂಪೂರ್ಣ ತೀರ್ಪು ವೆಬ್ ಸೈಟಿನಲ್ಲಿ ಅಪ್ಲೋಡ್ ಆಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ತಿಳಿಸಿದರು.ಈ ಮಹತ್ವದ ಪ್ರಕರಣದ ವಿಚಾರಣೆಯನ್ನು ನ್ಯಾಯಪೀಠ ಕಳೆದ ತಿಂಗಳ 25ಕ್ಕೆ ಪೂರ್ಣಗೊಳಿಸಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾರ್ಚ್ 15 ರಿಂದ 21 ರವರೆಗೆ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ರೀತಿಯ ಸಭೆಗಳನ್ನು ನಿಷೇಧಿಸಲಾಗಿದೆ!

Tue Mar 15 , 2022
ಬೆಂಗಳೂರು: ಬೆಂಗಳೂರಿನಲ್ಲಿ ಮಾರ್ಚ್ 15 ರಿಂದ ಮಾರ್ಚ್ 21 ರವರೆಗೆ ಒಂದು ವಾರದವರೆಗೆ ಎಲ್ಲಾ ರೀತಿಯ ಸಭೆಗಳು, ಪ್ರತಿಭಟನೆಗಳು, ಪ್ರತಿಭಟನೆಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗಳನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೋಮವಾರ ಘೋಷಿಸಿದ್ದಾರೆ.ಬೆಂಗಳೂರು ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಮಾರ್ಚ್ 15 ರಂದು ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಲಿರುವ ಕ್ರಮಗಳು. ಹೆಚ್ಚುವರಿ ಪೊಲೀಸ್ ಕಮಿಷನರ್, ಜಂಟಿ ಪೊಲೀಸ್ ಕಮಿಷನರ್ ಮತ್ತು ಪೊಲೀಸ್ […]

Advertisement

Wordpress Social Share Plugin powered by Ultimatelysocial