ಹಿಜಾಬ್-ಕೇಸರಿ ಸಂಘರ್ಷ ತಡೆಯಲು ಶಾಲಾ-ಕಾಲೇಜಿಗೆ ರಜೆ : ಆನ್‌ಲೈನ್ ಕ್ಲಾಸ್ ಕ್ಲಾಸ್ ನಡೆಸಲು ಖಾಸಗಿ ಶಾಲೆಗಳ ನಿರ್ಧಾರ

ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್​-ಕೇಸರಿ ಶಾಲು ಸಂಘರ್ಷಕ್ಕೆ ಕಡಿವಾಣ ಹಾಕಲು ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದೆ. ಆದರೆ, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿ ನಡೆಸಲು ನಿರ್ಧರಿಸಿವೆ.ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮೂರು ದಿನ ರಜೆ ಘೋಷಣೆ ಮಾಡಿರುವುದನ್ನು ಖಾಸಗಿ ಶಾಲೆಗಳು ಸ್ವಾಗತಿಸಿವೆಕರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಜ.6 ರಿಂದ 30ರವರೆಗೆ ಶಾಲಾ-ಕಾಲೇಜುಗಳು ಬಂದ್ ಆಗಿದ್ದವು. ಜ.31ರಿಂದ ಭೌತಿಕ ತರಗತಿಗಳನ್ನು ಆರಂಭಿಸಲಾಗಿತ್ತು. ಮತ್ತೆ ಮೂರು ದಿನ ರಜೆ ನೀಡಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ ನಡೆಸಲು ರಾಜ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಶಾಲೆಗಳಿಗೆ ಸೂಚನೆ ನೀಡಿದೆ.The post ಹಿಜಾಬ್-ಕೇಸರಿ ಸಂಘರ್ಷ ತಡೆಯಲು ಶಾಲಾ-ಕಾಲೇಜಿಗೆ ರಜೆ : ಆನ್‌ಲೈನ್ ಕ್ಲಾಸ್ ಕ್ಲಾಸ್ ನಡೆಸಲು ಖಾಸಗಿ ಶಾಲೆಗಳ ನಿರ್ಧಾರ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕ್ಕೇರಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅನಿವಾರ್ಯವಾಗಿ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ!

Wed Feb 9 , 2022
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕ್ಕೇರಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅನಿವಾರ್ಯವಾಗಿ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಪರಿಸ್ಥಿತಿ ಕೈ ಮೀರಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಒಂದು ವಾರಗಳ ಕಾಲ ಬಂದ್ ಮಾಡುವಂತೆ ಆಗ್ರಹಿಸುತ್ತಿದೆ.ಈ ವೇಳೆ ಶಿವಮೊಗ್ಗದಲ್ಲಿ ನಡೆದಿರುವ ಘಟನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯೊಂದಿಗೆ ಕೈಜೋಡಿಸಿರುವ ಕೆಲ ದೇಶವಿರೋಧಿಗಳು ಶಿವಮೊಗ್ಗದ ಕಾಲೇಜಿನಲ್ಲಿ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜವನ್ನು […]

Advertisement

Wordpress Social Share Plugin powered by Ultimatelysocial