ಹಿಜಾಬ್​ ವಿವಾದ: ಹೈಕೋರ್ಟ್​ ನೀಡಿದ ಐತಿಹಾಸಿಕ ತೀರ್ಪಿನ ಬಗ್ಗೆ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದು ಹೀಗೆ.

ಶಿವಮೊಗ್ಗ: ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ಕೊಟ್ಟಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಪ್ರಚೋದನೆ ನೀಡಿದವರು ಗಮನಿಸಿ ತಕ್ಷಣವೇ ಎಲ್ಲ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳುಹಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್​.

 

ಈಶ್ವರಪ್ಪ ಅವರು ಹೇಳಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇನ್ನಾದರೂ ಗೊಂದಲಗಳನ್ನು ಬಿಟ್ಟು ಶಾಲಾ-ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಲ್ಲರು ಕೋರ್ಟ್ ತೀರ್ಪಿಗೆ ತಲೆಬಾಗಲೇಬೇಕಿದೆ. ಕೋರ್ಟ್ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿರುವುದು ಸಂತೋಷ ತಂದಿದೆ. ಅನ್ಯಾಯವಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪ್ರಾಯೋಗಿಕ ಪರೀಕ್ಷೆಯನ್ನು ಕೆಲ ಮಕ್ಕಳು ತಪ್ಪಿಸಿಕೊಂಡಿದ್ದಾರೆ. ಕೋರ್ಟ್​ನ ಮಧ್ಯಂತರ ತೀರ್ಪಿನ ಅನ್ವಯ ನಡೆದುಕೊಂಡಿದ್ದರೆ ಮಕ್ಕಳಿಗೆ ಅನ್ಯಾಯವಾಗುತ್ತಿರಲಿಲ್ಲ‌ ಎಂದು ಹೇಳಿದರು.

ಸರ್ಕಾರ ಮುಸ್ಲಿಂ ಸಮುದಾಯದ ಮಕ್ಕಳಿಗೆ ಅನ್ಯಾಯವಾಗದ ರೀತಿ ಕ್ರಮ ಕೈಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಈಶ್ವರಪ್ಪ ಅವರು ಭರವಸೆಯನ್ನು ನೀಡಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಇಂದು ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿರುವ ಹೈಕೋರ್ಟ್​, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಿದೆ. ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದೆ. ನ್ಯಾಯಪೀಠವು 8 ನಿಮಿಷದಲ್ಲಿ ತೀರ್ಪು ಓದಿ‌ ಮುಗಿಸಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಕ್ರೇನಿಯನ್ ಅಧ್ಯಕ್ಷೀಯ ಸಲಹೆಗಾರರ ಪ್ರಕಾರ, ರಷ್ಯಾದೊಂದಿಗಿನ ಯುದ್ಧವು ಕೊನೆಗೊಳ್ಳುವ ಸಾಧ್ಯತೆಯಿದೆ!

Tue Mar 15 , 2022
ಉಕ್ರೇನಿಯನ್ ಅಧ್ಯಕ್ಷರ ಸಿಬ್ಬಂದಿ ಮುಖ್ಯಸ್ಥರ ಸಲಹೆಗಾರ ಒಲೆಕ್ಸಿ ಅರೆಸ್ಟೋವಿಚ್ ಸೋಮವಾರ ತಡವಾಗಿ ಹೇಳಿದರು, ಉಕ್ರೇನ್‌ನಲ್ಲಿನ ಯುದ್ಧವು ಮೇ ತಿಂಗಳ ಆರಂಭದಲ್ಲಿ ರಷ್ಯಾ ತನ್ನ ನೆರೆಹೊರೆಯ ಮೇಲೆ ದಾಳಿ ಮಾಡಲು ತನ್ನ ಸಂಪನ್ಮೂಲಗಳನ್ನು ಖಾಲಿ ಮಾಡಿದಾಗ ಕೊನೆಗೊಳ್ಳಬಹುದು ಎಂದು ಹೇಳಿದರು. ಸಂಘರ್ಷ-ಬಾಧಿತ ಉಕ್ರೇನಿಯನ್ ನಗರಗಳಿಂದ ಮಾನವೀಯ ಕಾರಿಡಾರ್‌ಗಳನ್ನು ತೆರೆಯುವುದನ್ನು ಹೊರತುಪಡಿಸಿ ಕೈವ್ ಮತ್ತು ಮಾಸ್ಕೋ ನಡುವಿನ ಮಾತುಕತೆಗಳಲ್ಲಿ ಸ್ವಲ್ಪ ಪ್ರಗತಿ ಕಂಡುಬಂದಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯಾವುದೇ ಮಾತುಕತೆಗಳಲ್ಲಿ ಅರೆಸ್ಟೋವಿಚ್ […]

Advertisement

Wordpress Social Share Plugin powered by Ultimatelysocial