ಹಿಜಾಬ್ ವಿವಾದವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: 6 ಬಾರಿ ಗೆದ್ದವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ?

 

ಬೆಂಗಳೂರು: ಹಿಜಾಬ್ ವಿಚಾರ ಆರಂಭವಾಗುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳು ಅದನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡ ಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.ರಾಜ್ಯದಲ್ಲಿ ಹಿಜಾಬ್ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ಆರಂಭ ಆಗುತ್ತಿದ್ದಂತೆಯೇ ಹಾಗೇ ಅದನ್ನು ಚಿವುಟಿ ಹಾಕುವ ಕೆಲಸ ಮಾಡಬೇಕಿತ್ತು.ಅದನ್ನು ಎರಡೂ ರಾಷ್ಟ್ರೀಯ ಪಕ್ಷಗಳೂ ಮಾಡಬೇಕಿತ್ತು. ಆದರೆ ಈಗ ತುಂಬಾ ಬೆಳವಣಿಗೆಗಳಾಗಿವೆ, ಹೀಗಾಗಿ ಕೋರ್ಟ್ ಏನು ತೀರ್ಪು ಕೊಡುತ್ತದೋ ಅದನ್ನು ಒಪ್ಪಬೇಕು ಎಂದು ಎಚ್‌ಡಿ ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಈಗ ಒಬ್ಬರು ರಾಜ್ಯಾಧ್ಯಕ್ಷರಾಗಿ ಇದ್ದಾರೆ. ಅವರು ಆರು ಬಾರಿ ಗೆದ್ದವರು. ಅವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ.? ಎಂದರು.

ಸಿಎಂ ಇಬ್ರಾಹಿಂ ಅವರಿಗೆ ಇಷ್ಟೇ ಹೇಳಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ವೇಳೆ ಗಣನೆಗೆ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ಕೊಟ್ಟಿದ್ದೇವೆ ಎಂದು ಹೇಳಿದರು.ಜೆಡಿಎಸ್ ತೊರೆಯುವುದಾಗಿ ಕೆಲ ಮುಖಂಡರು ಬಹಿರಂಗವಾಗಿಯೇ ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಲು ಸಮಯ ಇನ್ನೂ ಮೀರಿಲ್ಲ ಎಂದ ಅವರು, ಕೇವಲ 123 ಸೀಟುಗಳು ನಮ್ಮ ಗುರಿ ಎಂದು ಘೋಷಿಸುವುದು ಸಾಕವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಲಾಯರ್ ಜಗದೀಶ್ ವಕೀಲಿಕೆ ಮಾಡದಂತೆ ಬ್ಯಾನ್​!

Tue Feb 15 , 2022
ನ್ಯಾಯಾಲಯದ ಆವರಣದಲ್ಲಿ ಗಲಾಟೆ ಮಾಡಿ, ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಅರೆಸ್ಟ್ ಆಗಿರೋ ಲಾಯರ್​ ಜಗದೀಶ್‌ ಕೆ.ಎನ್‌. ಮಹಾದೇವ್‌ರನ್ನ ಈಗ ರಾಜ್ಯ ಬಾರ್‌ ಕೌನ್ಸಿಲ್‌ ಕರ್ನಾಟಕದಲ್ಲಿ ವಕೀಲಿಕೆ ಮಾಡದಂತೆ ಬ್ಯಾನ್‌ ಮಾಡಿದೆ. ಬಾರ್‌ ಕೌನ್ಸಿಲ್‌ ಸದಸ್ಯರ ವಿರುದ್ಧ ಅವಾಚ್ಯ ಶಬ್ಧ ಬಳಕೆ ಹಾಗೂ ಬಾರ್‌ ಕೌನ್ಸಿಲ್‌ ಬಗ್ಗೆ ಅನಗತ್ಯ ಸುಳ್ಳು ಪ್ರಚಾರದ ಆರೋಪದ ಮೇಲೆ ಈ ತೀರ್ಮಾನ ತೆಗೆದುಕೊಂಡಿದೆ ಎನ್ನಲಾಗಿದೆ. ವಕೀಲರೊಬ್ಬರ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಆರೋಪದಡಿ […]

Advertisement

Wordpress Social Share Plugin powered by Ultimatelysocial