ಹಿಜಾಬ್​ ಬೇಕು ಎನ್ನುವವರು ಮದರಸಾಗೆ ಹೋಗಲಿ: ಪ್ರತಾಪ್​ ಸಿಂಹ

 

ಮೈಸೂರು: ಎಲ್ಲ ರೀತಿಯ ಒತ್ತಡ, ಟೀಕಾಪ್ರಹಾರದ ನಡುವೆಯೂ ಶಾಲಾ-ಕಾಲೇಜುಗಳಳಲ್ಲಿ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್​ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಶಾಲಾ-ಕಾಲೇಜು ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ.ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತಿದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಾಗೆ ಹೋಗಿ ಎಂದು ಸಂಸದ ಪ್ರತಾಪ್​ ಸಿಂಹ ಸೂಚಿಸಿದ್ದಾರೆ.ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಪ್ರತಾಪ್​ ಸಿಂಹ, ಇದು ಬ್ರಿಟಿಷರ ಭಾರತವಲ್ಲ. ಇದು ಭರತಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶ ಇದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಾಗೆ ಹೋಗಿ. ಮದರಸಾದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ, ಸರ್ಕಾರಿ ಶಾಲೆಗಳಲ್ಲಿ ಈ ರೀತಿಯ ಪ್ರತ್ಯೇಕತೆ ಸಾಧ್ಯವಿಲ್ಲ ಎಂದರು.ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಏರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಪ್ರತಾಪ್ ಸಿಂಹ ಹೇಳಿದರು.ಸಿದ್ದರಾಮಯ್ಯ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ‘ಸಿದ್ದರಹೀಮ್ ಅಯ್ಯಾ’ ಅಂತಾ ಬೇಕಾದರೆ ಹೆಸರು ಬದಲಾಯಿಸಿಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

HONDA:ಹೋಂಡಾ ಕಾರುಗಳು ಫೆಬ್ರವರಿ ಅಂತ್ಯದವರೆಗೆ ಅದರ ಶ್ರೇಣಿಯಲ್ಲಿ ರೂ 35,596 ವರೆಗೆ ರಿಯಾಯಿತಿಗಳನ್ನು ನೀಡುತ್ತಿವೆ;

Sat Feb 5 , 2022
ಜಪಾನಿನ ವಾಹನ ತಯಾರಕ ಕಂಪನಿಯು ತನ್ನ ಶ್ರೇಣಿಯ ಕಾರುಗಳಿಗೆ ಗಮನಾರ್ಹ ರಿಯಾಯಿತಿಗಳನ್ನು ಘೋಷಿಸಿರುವುದರಿಂದ ಹೊಸ ಹೋಂಡಾ ಕಾರನ್ನು ಮನೆಗೆ ತರಲು ಈ ಫೆಬ್ರವರಿ ಅತ್ಯುತ್ತಮ ತಿಂಗಳು ಎಂದು ಸಾಬೀತುಪಡಿಸಬಹುದು. ಅದರ ಬಹು-ಪ್ರೀತಿಯ ಸೆಡಾನ್ ಹೋಂಡಾ ಸಿಟಿಯಿಂದ ಅದರ ಸಬ್‌ಕಾಂಪ್ಯಾಕ್ಟ್ ಕ್ರಾಸ್‌ಒವರ್ SUV ಹೋಂಡಾ WR-V ವರೆಗೆ, ಈ ಕಾರುಗಳನ್ನು ಈ ತಿಂಗಳು ರೂ.35,596 ವರೆಗಿನ ರಿಯಾಯಿತಿಯೊಂದಿಗೆ ಅಗ್ಗವಾಗಿ ಪಡೆಯಬಹುದು. ಆದಾಗ್ಯೂ, ಆಫರ್‌ಗಳು ಫೆಬ್ರವರಿ 2022 ರ ಅಂತ್ಯದವರೆಗೆ ಮಾತ್ರ ಮಾನ್ಯವಾಗಿರುತ್ತವೆ. […]

Advertisement

Wordpress Social Share Plugin powered by Ultimatelysocial