ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ.

ಹಾಲ್: ಗಣರಾಜ್ಯೋತ್ಸವದ ಅಂಗವಾಗಿ ನಾಗಪುರದ ಆರೆಸ್ಸೆಸ್ (RSS) ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಲಾಯಿತು.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತೆರಳಿರುವುದರಿಂದ ನಾಗಪುರ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಉಪಸ್ಥಿತರಿರಲಿಲ್ಲ.

ಆರೆಸ್ಸೆಸ್ ಸ್ವಯಂಸೇವಕರು ಹಾಗೂ ಪ್ರಚಾರಕರೆದುರು ನಾಗಪುರದ ಮಹಾಲ್ ಪ್ರದೇಶದಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ನಾಗಪುರ ಮಹಾನಗರ ಸಹ ಸಂಘಸಂಚಾಲಕ ಶ್ರೀಧರ್ ಗಾಡ್ಗೆ ತ್ರಿವರ್ಣ ಧ್ವಜವನ್ನು ಹಾರಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಗೆ ಬಿ.ಸಿ ಪಾಟೀಲ್‌ ನೀಡಿದ ಭರವಸೆಗಳಿವು.

Thu Jan 26 , 2023
ಚಿತ್ರದುರ್ಗ, ಜನವರಿ, 26: ಭಿನ್ನತೆಯಲ್ಲಿ‌ ಏಕತೆಯನ್ನು ಸಾಧಿಸಿದ ರಾಷ್ಟ್ರ ಭಾರತವಾಗಿದೆ. ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು. ಸಂವಿಧಾನ ರಚನೆ ಪೂರ್ಣಗೊಳಿಸಲು 2 ವರ್ಷ 11 ತಿಂಗಳು ಬೇಕಾಯಿತು. ಈ ಸಂವಿಧಾನ […]

Advertisement

Wordpress Social Share Plugin powered by Ultimatelysocial