ಹಾಸ್ಟೆಲ್ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರು 6 ತಿಂಗಳ ವೇತನ ನೀಡಬೇಕು!

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರು 6 ತಿಂಗಳ ವೇತನ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರವನ್ನು ಸೋಮವಾರ ಆರಂಭಿಸಿದರು.ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಈ ಪ್ರತಿಭಟನೆ ಆರಂಭವಾಗಿದೆ.ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿನ ಅಡುಗೆಯವರು, ಅಡುಗೆ ಸಹಾಯಕರು ಹಾಗೂ ಕಾವಲುಗಾರರಾಗಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 6 ತಿಂಗಳಿನಿಂದ ಸಂಬಳ ನೀಡಿಲ್ಲ ಎಂದು ಅವರು ಅಳಲು ತೋಡಿಕೊಂಡರು‌.ಹಾಸ್ಟೆಲ್ ಗಳಲ್ಲಿ ಅಡುಗೆ ಕೆಲಸವನ್ನು ಸಂಪೂರ್ಣವಾಗಿ ನಿಲ್ಲಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಅಡುಗೆ ತಯಾರಿಸಿ ಊಟ ಮಾಡಿ ಇಲ್ಲಿಯೇ ಮಲಗುತ್ತೇವೆ. ಬಾಕಿ ಉಳಿಸಿಕೊಂಡಿರುವ ವೇತನ ಕೈ ಸೇರುವವರೆಗೂ ಇಲ್ಲಿಂದ ಹೋಗುವುದಿಲ್ಲ ಎಂದು ಪ್ರತಿಭಟನನಿರತರು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್ .

Mon Feb 14 , 2022
  ನಟನ ಸತ್ಕಾರ್ಯಕ್ಕೆ ಮನತುಂಬಿ ಹಾರೈಸಿದ ಮಂಗಳಮುಖಿಯರು . ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ. ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡುವುದು […]

Advertisement

Wordpress Social Share Plugin powered by Ultimatelysocial