ಡಿಸೆಂಬರ್ 31 ರಂದು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದ್ರೆ ಕಠಿಣ ಕ್ರಮ : ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ;

ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಕೈಬಿಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ವ್ಯಾಪಾರಸ್ಥರು ತೀವ್ರ ಸಂಕಷ್ಟದಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ ಬಂದ್ ಮಾಡಬಾರದು. ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವ ಕುರಿತಂತೆ ಗಂಭೀರ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಡ್ಯದಲ್ಲಿ ಐವರು ಶಾಲಾ ಮಕ್ಕಳಿಗೆ ಕೋವಿಡ್ ಸೋಂಕು ಧೃಡ ; ಒಂದು ವಾರ ಶಾಲೆ ಸೀಲ್ ಡೌನ್

Wed Dec 29 , 2021
ಮಂಡ್ಯ :- ಜಿಲ್ಲೆಯಲ್ಲಿ ಕೆಲ ತಿಂಗಳುಗಳಿಂದ ರಜೆ ಮೇಲಿದ್ದ ಹೆಮ್ಮಾರಿ ಕೊರೋನಾ ಮತ್ತೆ ರುದ್ರ ನರ್ತನ ಮಾಡುತ್ತಿದ್ದು, ಇಂದು ಐವರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮದ್ದೂರು ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಸರ್ಕಾರಿ ಶಾಲೆಯ ಐವರು ಶಾಲಾ ಮಕ್ಕಳಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇಂದು ಸಾಮೂಹಿಕ ಕೊವಿಡ್ ಪರೀಕ್ಷಾ ನಡೆಸಿದ ವೇಳೆ […]

Advertisement

Wordpress Social Share Plugin powered by Ultimatelysocial