HSR ಬಡಾವಣೆ : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿ.ಎಂ. ದಿಢೀರ್‌ ಭೇಟಿ

ಬೆಂಗಳೂರು: ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್‌ ಭೇಟಿ ನೀಡಿದರು.

ಎಚ್‌ಎಸ್‌ಆರ್‌ ಬಡಾವಣೆಯ ಅಗರ ಕೆರೆ ಆಸುಪಾಸಿನಲ್ಲಿ ಮನೆಗಳಿಗೆ ನೀರು ನುಗ್ಗಿರುವ ತಗ್ಗುಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಗರದಲ್ಲಿ ಕೆಲವು ಕಡೆ ಪ್ರವಾಹ ಬಂದು ಜನವಸತಿಗಳಿಗೆಲ್ಲ ಸಾಕಷ್ಟು ತೊಂದರೆ ಆಗಿದೆ. ಅತಿ ಹೆಚ್ಚು ಮಳೆಯಾದ ಕೆಲವು ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಈ ತರಹ ಎಲ್ಲೆಲ್ಲಿ ಸಮಸ್ಯೆ ಉಂಟಾಗಿದೆ ಎಂಬುದನ್ನು ಪರಿಶೀಲಿಸುತ್ತೇನೆ. ಇಂದು ಕೆಲವು ಪ್ರದೇಶಗಳಿಗೆ ಮಾತ್ರ ಭೇಟಿ ನೀಡುತ್ತೇನೆ. ಇನ್ನುಳಿದ ಪ್ರದೇಶಗಳಿಗೆ ಮುಂದೆ ಭೇಟಿ ಕೊಡುತ್ತೇನೆ. ಪ್ರವಾಹ ತಪ್ಪಿಸಲು ಸೂಕ್ತ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ. ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ಕೊಡುತ್ತೇನೆ’ ಎಂದರು.

ಪದೇ ಪದೇ ಗಡುವು ನೀಡಿದರೂ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚದಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಈ ಬಗ್ಗೆಯೂ ಬಿಬಿಎಂಪಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುತ್ತೇನೆ’ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಟೀ ಅಂಗಡಿಯವನಿಗೆ ಗುಂಡೇಟು ಇಟ್ಟು ಪರಾರಿ...?

Mon Oct 18 , 2021
ನವದೆಹಲಿ, ಅ.18- ರಾತ್ರಿಯೆಲ್ಲಾ ಮೋಜು-ಮಸ್ತಿ ಮಾಡಿದ ಅಪ್ರಾಪ್ತ ಬಾಲಕರ ತಂಡ ಮುಂಜಾನೆ ಟೀ ಅಂಗಡಿಯವನಿಗೆ ಗುಂಡಿಟ್ಟು ಹತ್ಯೆ ಮಾಡಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಫ್ದರ್‍ಜಂಗ್ ಪ್ರಾಂತ್ಯದಲ್ಲಿ ಘಟನೆ ನಡೆದಿದ್ದು, ಗುಂಡೇಟು ತಿಂದ 26 ವರ್ಷದ ರಾಮಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಸಂಬಂಧ ಪಟ್ಟಂತೆ ಮೂವರು ಬಾಲಕರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿನಲ್ಲಿ ರಾಮಕೃಷ್ಣ ತನ್ನ ಟೀ ಅಂಗಡಿ ಆರಂಭಿಸುವ […]

Advertisement

Wordpress Social Share Plugin powered by Ultimatelysocial