ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್

DKS
ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಕಾವೇರಿದ ಬೆನ್ನಲ್ಲೇ ಬಿಜೆಪಿ ಮತ್ತು ಕೈಪಾಳ್ಯಗಳಲ್ಲಿ ಗುದ್ದಾಟ ಹೆಚ್ಚಾಗಿದೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿ ಘೋಷಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದವರು ಸಹ ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಶ್ರೀನಿವಾಸ ಮಾನೆ ಅವರನ್ನ ಕಣಕ್ಕಿಳಿಸಿದೆ . ಇಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಗವಹಿಸಿದರು.ಇನ್ನು ಚುನಾವಣೆ ಉದ್ದೇಶಿಸಿ ಮಾತನಾಡಿದ ಅವರು ,ಉಪಚುನಾವಣೆಗಳು ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಆಗುವುದಿಲ್ಲ. ಈ ರಾಜ್ಯದ ಜನತೆಗೆ ಆಗಿರುವ ನೋವು ಹೇಳಿಕೊಳ್ಳಲು ಇದು ಒಂದು ಅವಕಾಶ. ಉಪಚುನಾವಣೆಯಲ್ಲಿ ಆಡಳಿತ ಯಂತ್ರ ಬಳಸಿಕೊಳ್ಳುವ ಅವಕಾಶ ಇರುತ್ತದೆ. ಅದು ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಅವರು ಏನೇ ಮಾಡಿದರೂ ಮತದಾರರ ತೀರ್ಪು ಮುಖ್ಯ. ಜನ ತಮ್ಮ ಮತವನ್ನ ಒತ್ತಡ ಮತ್ತಿತರ ವಿಚಾರಕ್ಕೆ ಮಾರಿಕೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದರು.

ಇನ್ನು ಅರುಣ್ ಸಿಂಗ್ ಮತ್ತು ಯಡಿಯೂರಪ್ಪ ಅವರು ಪ್ರಾಮಾಣಿಕರು, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಿಲ್ಲ ಎಂದಿದ್ದರು. ಆದರೆ ಏನಾಯ್ತು? ಯತ್ನಾಳ್ ಹಾಗೂ ಬೆಲ್ಲದ್ ಅವರು ಏನು ಹೇಳಿದ್ದರು? ಮತ್ತೆ ಕೆಲವರು ಪರೀಕ್ಷೆ ಪಾಸ್ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಬಿಜೆಪಿ ಯವರ ಮಾತು ನಂಬಲು ಸಾಧ್ಯವಿಲ್ಲ. ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಅಂತ ಗುಡುಗಿದರು.

Please follow and like us:

Leave a Reply

Your email address will not be published. Required fields are marked *

Next Post

ಕುಮಾರಸ್ವಾಮಿ ಇತ್ತೀಚಿಗೆ ಸಾಕಷ್ಟು ಅಧ್ಯಾಯನ ಮಾಡುತ್ತಿದ್ದಾರೆ;ವಿ.ಸೋಮಣ್ಣ

Thu Oct 7 , 2021
ಕಲಬುರ್ಗಿ: ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಬಗ್ಗೆ ಟೀಕಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಇತ್ತೀಚೆಗೆ ಸಾಕಷ್ಟು ಅಧ್ಯಯನ ಮಾಡುತ್ತಿದ್ದಾರೆ. ಬಹುಶಃ ತಮ್ಮ ವಿದ್ಯಾರ್ಥಿ ದಿನಗಳಲ್ಲೂ ಇಷ್ಟೊಂದು ಓದಿರಲಿಕ್ಕಿಲ್ಲ‘ ಎಂದು ವಸತಿ ಸಚಿವ ವಿ. ಸೋಮಣ್ಣ ಟೀಕಿಸಿದ್ದಾರೆ. ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಬರುವಾಗಲೂ ಅವರೊಂದಿಗೆ ಮಾತನಾಡಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದೆ. ಅದು ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ನಿರತವಾಗಿದೆಯೇ ಹೊರತು […]

Advertisement

Wordpress Social Share Plugin powered by Ultimatelysocial