ಹುಬ್ಬಳ್ಳಿ: ಅಪಘಾತದಲ್ಲಿ ವ್ಯಕ್ತಿ ಸಾವು ಕೋರ್ಟ್ ಆದೇಶದ ಮೇರೆಗೆ ಬಸ್ ಜಪ್ತಿ

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕನೋರ್ವ ಅಪಘಾತದಲ್ಲಿ ಮೃತಪಟ್ಟರೂ ನೀಡಬೇಕಾದ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಾರೆಂಟ್ ಅನ್ವಯ ಕೋರ್ಟ ಸಿಬ್ಬಂದಿ ಐರಾವತ ಬಸ್ಸೊಂದನ್ನು ಜಪ್ತಿ ಮಾಡಿ ಹುಬ್ಬಳ್ಳಿ ಕೋರ್ಟ ಎದುರು ತಂದು ನಿಲ್ಲಿಸಿದ್ದಾರೆ.2019ರಲ್ಲಿ ಸಂಭವಿಸಿದ ನವಲಗುಂದ ಹುಬ್ಬಳ್ಳಿ ಸಂಭವಿಸಿದ ಅಪಘಾತದಲ್ಲಿ ದೇವಪ್ಪ ಕುಲಕರ್ಣಿ ಎಂಬವರು ಮೃತಪಟ್ಟಿದ್ದರು. ಮೃತ ಚಾಲಕನ ತಾಯಿ ಶ್ರೀಮತಿ ಶಾಂತವ್ವ ಕರವೀರಪ್ಪ ಕುಲಕರ್ಣಿ ಇವರು ನಗರದ ಎರಡನೇ ಹಿರಿಯ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯ 28 ಲಕ್ಷ ಪರಿಹಾರ ಅದಕ್ಕೆ ಶೇ.6 ಬಡ್ಡಿ ಹಾಕಿ ನೀಡುವಂತೆ ಸೂಚಿಸಿತ್ತು.
ಸಾರಿಗೆ ಸಂಸ್ಥೆಯವರಿಗೆ ವಾರೆಂಟ್ ನೀಡಿದರೂ ಪರಿಹಾರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಪ್ತಿ ವಾರಂಟ್ ಅನ್ವಯ ಇಂದು ನ್ಯಾಯಾಲಯದ ಸಿಬ್ಬಂದಿ ಕೆಎ 17,ಎಫ್ 1945 ವಾಹನ ಜಪ್ತಿ ಮಾಡಿ ತಂದು ಕೋರ್ಟ ಎದುರು ನಿಲ್ಲಿಸಿದ್ದಾರೆ. ಮೃತ ಪ್ರಯಾಣಿಕನ ಪರ ಅರುಣ ಪಾಟೀಲ ವಕಾಲತ್ತು ವಹಿಸಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಲಲಿತ್ ಮೋದಿಯ ಪ್ರೀತಿಯಲ್ಲಿ ಸುಶ್ಮಿತಾ.. ಮಾಲ್ಡೀವ್ಸ್ ನಿಂದ ವಿಡಿಯೋ ಹಂಚಿಕೊಂಡ ನಟಿ

Fri Jul 15 , 2022
  ಮಾಜಿ ವಿಶ್ವಸುಂದರಿ ಮತ್ತು ನಟಿ ಸುಶ್ಮಿತಾ ಸೇನ್ ಡೇಟಿಂಗ್ ಮಾಡುತ್ತಿದ್ದಾರೆ ಹೌದು ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ಅವರಿಬ್ಬರು ಮಾಲ್ಡೀವ್ಸ್‌ನಲ್ಲಿ ಶಿಕಾರ್ ಎಂಜಾಯ್ ಮಾಡುತ್ತಿರುವ ಮತ್ತು ಲಂಡನ್‌ನಲ್ಲಿ ತಮ್ಮ ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಲಲಿತ್ ಮೋದಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಸುಶ್ಮಿತಾ ಅವರನ್ನು ತಮ್ಮ ಉತ್ತಮ ಅರ್ಧ (ಪತ್ನಿ) ಎಂದು ಪರಿಚಯಿಸಿದರು. ಆ ನಂತರ ತಾವು […]

Advertisement

Wordpress Social Share Plugin powered by Ultimatelysocial