ಎರಡು ಏತ ನೀರಾವರಿ ಯೋಜನೆ ಹುತಾತ್ಮ ರೈತರಿಗೆ ಅರ್ಪಣೆ: ಸಚಿವ ಮುನೇನಕೊಪ್ಪ*

ಹುಬ್ಬಳ್ಳಿ; ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ ತಾಲೂಕಿನ ಜ್ವಲಂತ ಸಮಸ್ಯೆಗಳ ಕುರಿತು ಸಚಿವ ಶಂಕರಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಸಾರ್ವಜನಿಕರ ಜ್ವಲಂತ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಈ ಬಗ್ಗೆ ಪಿಡಬ್ಲೂಡಿ, ಸಾರಿಗೆ ಅಧಿಕಾರಿಗಳು, ಕೆಡಿಪಿ ಸದಸ್ಯರ ಸಮ್ಮುಖದಲ್ಲಿ ಸಮಸ್ಯೆಗಳನ್ನು ಆಲಿಸಲಾಗಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದರು‌.

ನಾಳೆ ಜಿಲ್ಲೆಯಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಎರಡು ಏತ ನೀರಾವರಿಗೆ ಚಾಲನೆ ನೀಡುವ ಮೂಲಕ ಬೆಣ್ಣಿ ಹಳ್ಳ ಹಾಗೂ ತುಪ್ಪರಿಹಳ್ಳದ ಏತ ನೀರಾವರಿ ಯೋಜನೆಯನ್ನು ಹುತಾತ್ಮ ರೈತರಿಗೆ ಸಮರ್ಪಣೆ ಮಾಡುವ ಕಾರ್ಯವನ್ನು ಮಾಡಲಾಗುತ್ತದೆ. ಈಗಾಗಲೇ ಒಂದು ಟಿಎಂಸಿ ನೀರನ್ನು ಸಾರ್ವಜನಿಕರಿಗೆ ಕುಡಿಯುವ ಸಲುವಾಗಿ ಇಂತಹದೊಂದು ಮಹತ್ವದ ಯೋಜನೆಯ ಸಮೀಕ್ಷೆ ಕೂಡ ಮಾಡಲಾಗಿದೆ. ಇನ್ನೇನು ಕೆಲವು ದಿನಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಚಾಮರಾಜಪೇಟೆ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳ ವಿತರಣೆ & ಹಲವು ವಿದ್ಯಾರ್ಥಿಗಳ ಶಾಲಾ ಶುಲ್ಕ ಭರಿಸಲು ತಲಾ 50,000 ರೂ. ನೆರವು ಆರ್ಥಿಕ ನೆರವು ನೀಡಿದ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್

Wed Jul 20 , 2022
ಚಾಮರಾಜಪೇಟೆ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು, ಪಾದರಾಯನಪುರ ವಾರ್ಡಿನ ಗೋರಿಪಾಳ್ಯದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳು ಹಾಗೂ ಇಬ್ಬರು ವಿಕಲ ಚೇತನರಿಗೆ ವಿಶೇಷ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಇದೇ ವೇಳೆ, […]

Advertisement

Wordpress Social Share Plugin powered by Ultimatelysocial