ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಳಗಾವಿ, ಡಿ.21: ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕವಾಗಿ ಗುಂಪು ಸೇರುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್, ಒಮೈಕ್ರಾನ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಇಂದು ಅಪರಾಹ್ನ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಮಾಧ್ಯಮದವರಿಗೆ ಈ ಮಾಹಿತಿ ಹಂಚಿಕೊಂಡರು.

ಡಿ.30ರಿಂದ ಜನವರಿ 2ರವವರೆಗೆ ರಾಜ್ಯಾದ್ಯಂತ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಕೋವಿಡ್ ಮತ್ತು ಒಮೈಕ್ರಾನ್ ಪರಿಸ್ಥಿತಿ ಅವಲೋಕಿಸಿ ತಜ್ಞರ ಶಿಫಾರಸಿನಂತೆ ಈ ಮಾರ್ಗಸೂಚಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.

ಅಪಾರ್ಟ್ ಮೆಂಟ್ ಗಳಲ್ಲು ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜಿಸುವಂತಿಲ್ಲ. ಅದೇರೀತಿ ಕ್ರಿಸ್ಮಸ್ ಹಬ್ಬ ವೇಳೆ ಬಹಿರಂಗವಾಗಿ ಪಾರ್ಟಿ ಆಯೋಜಿಸುವಂತಿಲ್ಲ. ಆದರೆ ಸುರಕ್ಷಿತ ಅಂತರ ಕಾಯ್ದುಕೊಂಡು ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಮುಖ್ಯಮಂತ್ರಿ ವಿವರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟಿ ಮೇಘನಾ ಮನೆಯಲ್ಲಿ ಕ್ರಿಸ್ಮಸ್ ಗೆ ಭರ್ಜರಿ ತಯಾರಿ

Tue Dec 21 , 2021
ಕ್ರಿಸ್‍ಮಸ್ ಹಬ್ಬಕ್ಕೆ ಈ ಬಾರಿ ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಮನೆಯಲ್ಲಿ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಸಿಂಗಾರಗೊಂಡಿರುವ ಮನೆಯಲ್ಲಿ ಮೇಘನಾ ಪ್ರೀತಿಯ ಮಗನೊಂದಿಗೆ ಫೋಟೋವೊಂದನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಕ್ರಿಸ್‍ಮಸ್ ಹಬ್ಬಕ್ಕೆ ಇನ್ನೇನು 4 ದಿನಗಳಷ್ಟೇ ಬಾಕಿ ಇದೆ. ಈ ಬಾರಿ ಹಬ್ಬಕ್ಕೆ ಮೇಘನಾ ರಾಜ್ ಮನೆಯನ್ನು ಸಖತ್ ಕಲರ್ ಫುಲ್ ಆಗಿ ಸಿಂಗರಿಸಲಾಗಿದೆ. ಇನ್ನೂ ಈ ಫೋಟೋವನ್ನು ಮೇಘನಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial