ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ಕಿಡಿ

ನಾವು ಯಾರನ್ನು ವಿರೋಧಿಸಿದ್ದೆವೋ ಅವರೇ ಈಗ ಯಡಿಯೂರಪ್ಪ ಅವರ ಸ್ನೇಹಿತರಾಗಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಸಿಎಂ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ. ಕೇಂದ್ರದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಒಪ್ಪಿಗೆಯನ್ನೇ ನೀಡಿಲ್ಲ. ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಲು ಇಷ್ಟೊಂದು ಅವಸರ ಏಕೆ? ಬಿಜೆಪಿ ಸರ್ಕಾರ ರಚನೆಯಲ್ಲಿ ಯೋಗೇಶ್ವರ್ ಪಾತ್ರವೇನಿತ್ತು? ಅವರೇನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರೇ? ಎಂದು ಪ್ರಶ್ನಿಸಿರುವ ವಿಶ್ವನಾಥ್ ಅವರ ಬದಲಿಗೆ ಪಕ್ಷದ ಹಿರಿಯ ನಾಯಕರಾದ ಉಮೇಶ್ ಕತ್ತಿ, ಬಸವನಗೌಡ ಪಾಟೀಲ್ ಅವರನ್ನು ಮಂತ್ರಿ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ:ಸಿಸಿಬಿ ಪೊಲೀಸರಿಂದ ಜಾಕೀರ್ ಬಂಧನ

Please follow and like us:

Leave a Reply

Your email address will not be published. Required fields are marked *

Next Post

ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ

Thu Dec 3 , 2020
ಗದಗ ತಾಲೂಕಿನ ಆದರಹಳ್ಳಿ ಗ್ರಾಮದಿಂದ ದೇವಿಹಾಳ್ಳಿ ಗ್ರಾಮದವರೆಗೆ ಹೋಗುವ ರಸ್ತೆ ಡಾಂಬರೀಕರಣ ಸಂಪೂರ್ಣ ಕಿತ್ತು ಹೋಗಿದೆ. ಗ್ರಾಮದ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ರೈತರಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಇದಕ್ಕೆ ಕಲ್ಲಿನ ಕ್ವಾರಿಗಳು ಹಾಗೂ ಓವರಲೋಡ ತುಂಬಿ ರಸ್ತೆ ಎಲ್ಲಾ ಹಾಳು ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಸ್ತೆ ಅವ್ಯವಸ್ಥೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದಾರೆ. ತಕ್ಷಣ ಸಂಬಂಧಿಸಿದ ಜನಪ್ರತಿನಿಧಿಗಳು […]

Advertisement

Wordpress Social Share Plugin powered by Ultimatelysocial