ನಾನು ಕಲಿತ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದೇನೆ.

ವದೆಹಲಿ: ಮುಂದಿನ ತಿಂಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರು ಇಂಗ್ಲೆಂಡ್‌ಗೆ ಭೇಟಿ ನೀಡಲಿದ್ದು, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇಂಗ್ಲೆಂಡ್ ಭೇಟಿಯ ವಿಚಾರವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, ನಾನು ಕಲಿತ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದೇನೆ.

ಜಿಯೋಪಾಲಿಟಿಕ್ಸ್, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ಪ್ರಜಾಪ್ರಭುತ್ವ ಕುರಿತು ಹೊಸ ಮನಸ್ಸುಗಳೊಂದಿಗೆ ಸಂವಾದ ನಡೆಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಜಡ್ಜ್ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸ ನೀಡಲಿದ್ದೇನೆ ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ಜಿಯೋಪಾಲಿಟಿಕ್ಸ್, ಅಂತಾರಾಷ್ಟ್ರೀಯ ಸಂಬಂಧಗಳು, ಬಿಗ್ ಡೇಟಾ ಮತ್ತು ಪ್ರಜಾಪ್ರಭುತ್ವ ಸೇರಿದಂತೆ ವಿವಿಧ ವಲಯಗಳಕ್ಕೆ ಸಂಬಂಧಿಸಿದಂತೆ ಹೊಸ ಮನಸ್ಸುಗಳೊಂದಿಗೆ ಸಂವಾದ ನಡೆಸುವುದನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಭೇಟಿಯ ಕುರಿತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಜಡ್ಡ್ ಬಿಸಿನೆಸ್ ಸ್ಕೂಲ್ ಕೂಡ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದೆ. ಅವರು ಸಾಕಷ್ಟು ವಿಷಯಗಳ ಮೇಲೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ತನ್ನ ಟ್ವೀಟ್‌ನಲ್ಲಿ ತಿಳಿಸಿದೆ. ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಭಾರತ್ ಜೋಡೋ ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ. ದಕ್ಷಿಣ ಕನ್ಯಾಕುಮಾರಿಯಿಂದ ಉತ್ತರ ಶ್ರೀನಗರದವರೆಗೆ ಅವರ ಪಾದಯಾತ್ರೆ ಕೈಗೊಂಡ, ದೇಶವನ್ನು ಒಂದುಗೂಡಿಸುವ ಕೆಲಸವನ್ನು ಮಾಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆ ಖರೀದಿಸುವ ಮಧ್ಯಮ ವರ್ಗದ ಕನಸು ನನಸಾಗುವುದೇ?!

Fri Feb 17 , 2023
ಬೆಂಗಳೂರು, ಫೆಬ್ರವರಿ. 17: ಸಿಲಿಕಾನ್ ಸಿಟಿಯಲ್ಲಿ ಸ್ವಂತ ಮನೆ ಮಾಡಿಕೊಳ್ಳಬೇಕು ಎಂಬ ಎಷ್ಟೋ ಮಧ್ಯಮ ವರ್ಗದ ಜನರ ಕನಸು. ಇದಕ್ಕಾಗಿ ತಮ್ಮ ದುಡಿಮೆಯ ಬಹುಪಾಲನ್ನು ಕೂಡಿಡುತ್ತಾರೆ. ಒಂದು ಪುಟ್ಟ್ ಮನೆಗಾಗಿ ಸೈಟ್ ತೆಗೆದುಕೊಳ್ಳುವುದರಿಂದ ಹಿಡಿದು ಗೃಹ ಪ್ರವೇಶ ಮಾಡುವಷ್ಟರಲ್ಲಿ ಸಾಕು ಸಾಕಾಗಿರುತ್ತದೆ. ಆದರೂ ಒಮದು ಕನಸಿನ ಸೂರಿಗಾಗಿ ಕಷ್ಟಪಡುತ್ತಾರೆ. ಆದರೆ, ಸಿಲಿಕಾನ್ ಸಿಟಿಯಲ್ಲಿ ಸ್ವಂತ ಮನೆಯ ಆಸೆ ದಿನದಿಂದ ದಿನಕ್ಕೆ ಗಗನ ಕುಸುಮವಾಗಿ ಪರಿಣಮಿಸುತ್ತಿದೆ. ಗಗನಕ್ಕೇರುತ್ತಿರುವ ಆಸ್ತಿ ಬೆಲೆಗಳ ಜೊತೆಗೆ, […]

Advertisement

Wordpress Social Share Plugin powered by Ultimatelysocial