ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.!

ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ.

ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ.

ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.

ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಅಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಉದ್ದೇಶಿಸಲಾಗಿದೆ.

ಹೀಗಾಗಿ ನೂತನ ಪದಾಕಾರಿಗಳ ಅಕಾರ ಸ್ವೀಕಾರವು ಅಂದೇ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಜನತಾ ಜಲಧಾರೆ ಕಾರ್ಯಕ್ರಮವನ್ನು ಆರಂಭಿಸಿರುವ ಜೆಡಿಎಸ್ ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಕಾರಕ್ಕೆ ಬರಬೇಕೆಂಬ ಮಹದಾಸೆ ಹೊಂದಿದೆ.
ಇದಕ್ಕೆ ಪೂರಕವಾಗಿ ಕಾರ್ಯತಂತ್ರಗಳನ್ನು ರೂಪಿಸಿ ಜನರ ಮನಸೆಳೆಯುವ ಪ್ರಯತ್ನವನ್ನು ನಿರಂತರವಾಗಿ ಮಾಡಲು ಉದೇಶಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂತೋಷ್ ಪಾಟೀಲ್ ಆತ್ಮಹತ್ಯೆ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ !

Thu Apr 14 , 2022
ಬೆಂಗಳೂರು, ಏ.14- ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಕಾರಾವಯಲ್ಲಿ ಇಂತಹ ಅನೇಕ ಪ್ರಕರಣಗಳು ನಡೆದಿವೆ. ಕೊಲೆ ಪ್ರಕರಣಗಳನ್ನೇ ಹಿಂಪಡೆದಿರುವ ಅವರಿಗೆ ಈಗ ಪ್ರತಿಭಟನೆ ನಡೆಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಹೋರಾಟ ನಡೆಸುವ […]

Advertisement

Wordpress Social Share Plugin powered by Ultimatelysocial