ಇಬ್ರಾಹಿಂ ಸುತಾರ ಕನ್ನಡನಾಡಿನ ಇಂದಿನ ಯುಗದ ಕಬೀರರೆಂಬ ಭಾವ ಮೂಡಿಸಿದ್ದವರು.

 

ಇಬ್ರಾಹಿಂ ಸುತಾರ ಕನ್ನಡನಾಡಿನ ಇಂದಿನ ಯುಗದ ಕಬೀರರೆಂಬ ಭಾವ ಮೂಡಿಸಿದ್ದವರು. ಮಹಾಲಿಂಗಪುರದ ಇಬ್ರಾಹಿಂ ಸುತಾರ ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿದ ಮಹಾನುಭಾವ.ಇಬ್ರಾಹಿಂ ಸುತಾರ 1940ರ ಮೇ 10ರಂದು ಜನಿಸಿದರು. ತಂದೆ ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್. ತಾಯಿ ಅಮೀನಾಬಿ. ಮನೆಯಲ್ಲಿನ ಬಡತನ ಮೂರನೇ ತರಗತಿಗೆ ಅವರ ಶಿಕ್ಷಣವನ್ನು ನಿಲ್ಲಿಸಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಕೆಯನ್ನೇ ಸುತಾರ ಕಲಿತರು. ಬದುಕಿಗೆ ಅದೇ ದಾರಿಯಾಯಿತು.ಇಬ್ರಾಹಿಂ ಸುತಾರ ಬಾಲ್ಯದಲ್ಲಿ ಮಸೀದಿಗೆ ಹೋಗಿ ಅಲ್ಲಿ ಧರ್ಮಗುರುಗಳ ಮಾರ್ಗದರ್ಶನದಲ್ಲಿ ನಮಾಜು, ಪ್ರಾರ್ಥನೆ ಕಲಿತು ಕುರಾನ್ ಅಧ್ಯಯನ ಮಾಡಿದರು. ಈ ವೇಳೆ ಬೇರೆ ಧರ್ಮಗಳ ಸಾರ ಅರಿಯುವ ಆಶಯ ಅವರಲ್ಲಿ ಮೊಳಕೆಯೊಡೆಯಿತು. ಅದಕ್ಕೆ ಊರಿನ ಸಾಧುನ ಗುಡಿಯಲ್ಲಿದ್ದ ಭಜನಾ ಸಂಘ ಒತ್ತಾಸೆ ನೀಡಿತು. ಅಲ್ಲಿನ ಧಾರ್ಮಿಕರ ಸಾಂಗತ್ಯದಲ್ಲಿ ತತ್ವಪದ, ವಚನಗಳನ್ನು ಕಲಿತರು. ಉಪನಿಷತ್ತಿನ ಸಾರ ಅರಿತುಕೊಂಡರು. ರಮ್ಜಾನ್ ವೇಳೆ ಮುಂಜಾನೆ ಜನರನ್ನು ಎಬ್ಬಿಸಲು ಹಳ್ಳಿಗಳಿಗೆ ಹಾಡುತ್ತಾ ಹೋಗುತ್ತಿದ್ದ ತಂಡದಲ್ಲಿ ಸಂಚರಿಸಿ ಜೀವನಾನುಭವ ಪಡೆದುಕೊಂಡ ಅವರು, ಮಹಾಲಿಂಗಪುರದಲ್ಲಿ ಬಸವಾನಂದ ಸ್ವಾಮಿಗಳ ಪುಣ್ಯಾರಾಧನೆ ನಿಮಿತ್ತ ಪ್ರತಿ ವರ್ಷ ಒಂದು ತಿಂಗಳು ಕಾಲ ಬೆಳಿಗ್ಗೆ ಹಾಗೂ ಸಂಜೆ ನಡೆಯುತ್ತಿದ್ದ ಪ್ರವಚನ ಕೇಳುತ್ತಿದ್ದರು. ‘ಅಲ್ಲಿನ ಧಾರ್ಮಿಕ ಚಿಂತನೆಗಳು ನನ್ನಲ್ಲಿನ ತಿಳಿವಳಿಕೆ ವಿಸ್ತರಿಸಲು ನೆರವಾಯಿತು’ ಎಂದು ಸುತಾರ ಸ್ಮರಿಸಿಕೊಳ್ಳುತ್ತಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿ. ಜಿ. ಎಲ್. ಸ್ವಾಮಿ ಮಹಾನ್ ಸಸ್ಯಶಾಸ್ತ್ರಜ್ಞ.

Mon Feb 6 , 2023
ಬಿ. ಜಿ. ಎಲ್. ಸ್ವಾಮಿ ಮಹಾನ್ ಸಸ್ಯಶಾಸ್ತ್ರಜ್ಞರಾಗಿ, ಸಂಶೋಧಕರಾಗಿ, ಶಿಕ್ಷಕರಾಗಿ; ಕನ್ನಡ ಸಾಹಿತ್ಯದ ವಿನೋದಪೂರ್ಣ, ವಿಚಾರಪೂರ್ಣ ಹಾಗೂ ವೈಜ್ಞಾನಿಕ ಮಹಾನ್ ಬರಹಗಾರರಾಗಿ ಪ್ರಸಿದ್ಧರಾಗಿದ್ದಾರೆ.ಕೇಂಬ್ರಿಜ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕಾರ್ನರ್ ಅವರಿಂದ ಪ್ರಶಂಸಿತರಾದ ಬಿ.ಜಿ.ಎಲ್. ಸ್ವಾಮಿ (ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣ ಸ್ವಾಮಿ) ಕನ್ನಡದ ಒಬ್ಬ ವಿಶಿಷ್ಟ ಬರಹಗಾರ, ಚಿಂತಕ ಹಾಗೂ ಸಂಶೋಧಕ. ಅವರ ವ್ಯಂಗ್ಯಬರಹಗಳಲ್ಲಾಗಲೀ, ಪ್ರವಾಸ ಕಥನಗಳಲ್ಲಾಗಲಿ, ಸಂಶೋಧನ ಗ್ರಂಥಗಳಲ್ಲಾಗಲಿ ಅವರ ‘ಸ್ವಾಮಿತನ’ ಎನ್ನಬಹುದಾದ ವಿಶಿಷ್ಟತೆ ಎದ್ದುಕಾಣುವಂಥದು. ಸಾಹಿತ್ಯದಲ್ಲಿ ಈ ಬಗೆಯ ಸಾವಯವ […]

Advertisement

Wordpress Social Share Plugin powered by Ultimatelysocial